ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ವಶದಲಿ ಇದ್ದು ಇದ್ದು ಮುನ್ನೆ ದುರ್ವೃತ್ತಿಗೆ ಪೋಗುವುದೆನ್ನ ಮನಾ ಪ ಚಿತ್ರವಾದ ಕರಿಯ ಶೃಂಗರಿಸಿ ಮೇಲೆ ಛತ್ರಿಗೆ ನೆರಳಲ್ಲಿ ಕುಳ್ಳಿರೆನೆ ಆನೆ ಕೆಳಗೆ ಇಳಿದು ಬೂದಿಯೊಳಗಿಪ್ಪ ಕತ್ತೆ ಏರುವನೆಂದು ಇಚ್ಛೆ ಮಾಡುತಲಿದೆ 1 ಕಾಲಕಾಲಕೆ ಸುಧಿಯ ಸವಿದು ಮಾಣಿಕದ ಉಯ್ಯಾಲೆ ಮೇಲಾಡುತ್ತ ಬಾಳು ಎನೆ ತಾಳವೃಕ್ಷವನೇರಿ ತಲೆಕೆಳಗಾಗಿ ತಾ ಬೀಳುವೆನೆಂದು ಅಪೇಕ್ಷೆ ಮಾಡುತಲಿದೆ 2 ವೇಣಿ ಮಾಧವರಾಯಾ ನಿನ್ನ ಚರಣಾಂಬುಜ ಕಾಣುವ ಪ್ರಕಾಶ ಉದಾಸಸಿ ಕ್ಷೋಣಿಯೊಳಗೆ ಮಹಾ ಕತ್ತಲೆ ಬಯಸುವೆ ಹೀನನಂತೆಯಾದೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ