ಶ್ರೀ ನರಸಿಂಹದೇವ ಶರಣ ರಕ್ಷಕನೆ
ದಾನವಾರಿ ಸುಭಕ್ತಾಧೀನ ಮೂರುತಿಯೆ ಪ.
ಹರಿ ತನ್ನ ದೈವವೆಂದು ಸ್ಮರಿಸುತಿರಲು ಬಾಲ
ನಿರವ ಕಾಣದೆ ದುಷ್ಟಹಿರಣ್ಯಕಾಸುರನು
ಪರಿ ಹಿಂಸಿಸೆ ಮೊರೆದು ಕೋಪದೊಳೆದ್ದು
ತರಳಗೊಲಿದೆ ಬಹು ಕರುಣಾನಿಧಿಯೆ 1
ಛಿಟಿ ಛಿಟಿಲೆಂದಾರ್ಭಟಿಸಿ ಕಂಬವು ಸಿಡಿಯೆ
ಕಟಿ ಮಸಿದಗ್ನಿ ನಿಟ್ಟುಸಿರಿನಿಂ ಹಲ್ಗಳ
ಕಟಿ ಕಡಿವುತುಬ್ಬಸ ತೋರಿ ನಿಂದ
ಕಠಿಣ ಮೂರುತಿಯೆ 2
ಕೊಬ್ಬಿದ ಹಿರಣ್ಯಕನುಬ್ಬ ಮುರಿವೆನೆಂದು
ಹೆಬ್ಬಾಗಿಲೊಳು ಸಂಜೆ ಮಬ್ಬಿನಲಿ ಧನುಜನ
ಗರ್ಭವ ನಖದಿಂದ ಇಬ್ಭಾಗವನು ಮಾಡಿ
ಹಬ್ಬಿದ ಕರುಳನು ಹರುಷದಿ ಧರಿಸಿದೆ 3
ಭೀತರಾದ ಸುರವ್ರಾತ ಪ್ರಾರ್ಥಿಸೆ ಬಹು
ಶಾಂತನಾಗಿ ಸಂತೋಷಪಡಿಸಿದ ಅ-
ನಾಥ ರಕ್ಷಕನೆ ಕಾತರವಳಿದೆ 4
ಖಳನ ಮರ್ದಿಸಿ ಬಹು ಇಳೆಯ ಪಾಲಿಸಿದೆ
ನಳಿನ ಸಂಭವಗೆ ಬಲು ಹರುಷವನಿತ್ತೆ
ಹೆಳವನಕಟ್ಟೆ ಶ್ರೀ ರಂಗ ದಾಗಿನಕಟ್ಟೆನೆಲೆವಾಸ ಕಂಬದ ನರಸಿಂಹದೇವ 5