ಹರಿಹರಿ ಕೊಡು ನಿನ್ನಯಚ್ಚರನು
ಶರಣವಾ ಧೃಡದಲಿ ಬಂದೆನಾನು ಪ
ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ
ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1
ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ
ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2
ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ |
ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3
ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ |
ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4
ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು
ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5