ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜÁ್ಞನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜÁ್ಞನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು