ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡು ನೋಡು ಜೀವನೆ ನೀ ನಿನ್ನಯ ನಿಜರೂಪವಾ ತಿಳಿದು ನಲಿದು ಜÁ್ಞನಪಥದಿ ಆನಂದವ ಹೊಂದು ನೀ ಪ ಅಮರನಾದ ಆತ್ಮ ನೀನು ಆನಂದದ ನಿಧಿಯೇ ನೀ ಅರಿತು ಇದನು ನಿನ್ನ ಮನದಿ ಶಾಂತರೂಪನಾಗು ನೀ 1 ನಾನೆನ್ನುವ ಅನಿಸಿಕೆಯದು ಅಡಗಲು ತಾನುಳಿಯುವಾ ತೋರಿಕೆಯನು ಮೀರಿದಾ ನಿರ್ವಿಕಲ್ಪ ನೋಡು ನೀ ಶ್ರವಣ ಮನನ ನಿದಿಧ್ಯಾಸ ಸಾಧನೆಗಳ ಮಾಡುತಾ ತಿಳಿವುದಾತ್ಮರೂಪ ನಾನೆ ಎಂದು ನಿನ್ನ ಮನದಲಿ 2 ಮನದೊಳಗೀಪರಿಯಾ ದೃಢತರದಲಿ ನಿಶ್ಚಿತಮಾಡೀ ದೇಹ ಮನಸು ಬುದ್ಧಿಗಳಿವು ನಾನಲ್ಲೆಂದರಿಯುತ ತೋರಿ ಅಡಗುತಿರುವ ಜಗವು ಕನಸೇ ಎಂದರಿತು ನೀ ಪರಮಸತ್ಯ ಆತ್ಮರೂಪ ನಾನಿಹೆನೆಂದರಿತುಕೋ 3 ಪ್ರೇಮರೂಪ ನೀನೆ ಎಂದು ಸಾರಿ ಪೇಳ್ದ ಜÁ್ಞನವ ಆ ಮಹಾತ್ಮಶಂಕರಗುರುರಾಜನ ನುಡಿ ತಿಳಿಯೋ ನೀ 4
--------------
ಶಂಕರಭಟ್ಟ ಅಗ್ನಿಹೋತ್ರಿ