ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಡದೆ ಬೇಡದೆ ಕಂಗೆಡದೆ ಕೋ ಮನವೆ ನಿಜ ಸುಭಿಕ್ಷ ಗುರು ಸಂರಕ್ಷ ಧ್ರುವ ಅಳುಕದೆ ಬಳುಕದೆ ತುಳುಕದೆ ನಿಂದು ತಿಳಕೊ ನಿಜಸುಭಿಕ್ಷೆ ಕೊಳಕ ಹುಳಕ ಮೊಳಕನೆಂದು ಮಾಡದಿರುಪೇಕ್ಷ ನಾಳೆ ನಾಡದಿಂದ್ಯಾಗೆಂದು ಕಲ್ಪಿಸಿಕೊಬ್ಯಾಡಪೇಕ್ಷ 1 ಲಜ್ಜೆ ಅಳಿದು ಗುರು ಶರಣವ ಹೊಕ್ಕು ಸರಕ್ಕನೆ ಕೋ ಸುಭಿಕ್ಷೆ ಹೆಜ್ಜೆಜ್ಜಿಗೆ ಸುರಿಮಳೆಗರೆವುತಲದೆ ಗುರುಕರುಣದಕಟಾಕ್ಷ ಫಜ್ಜಿಗೆ ಬಂದುವರಿತ ಮ್ಯಾಲೆ ಕಂಜನಾಭನೆ ಸುಪಕ್ಷ 2 ಬೇಡಿಸಿಕೊಳ್ಳದೆ ನೀಡುತಲಾನೆ ಭಾಸ್ಕರ ಗುರು ಸಮರ್ಥ ನೀಡಿ ನಿಜನಿಧಾನವ ಕೊಟ್ಟು ಮಾಡುತಲಾನೆ ಹಿತಾರ್ಥ ಬಡವರಾಧಾರೆನ್ನೊಡೆಯನೆ ಜಗತ್ರಯಕ್ಕೊಬ್ಬನೆ ಕರ್ತ ಮೂಢ ಮಹಿಪತಿಗನುದಿನ ಬಿಡದೆ ನೀಡುತಾನೆ ಸಕಲಾರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಂಥವ್ಯಾಕೋ ಪ್ರತಿಜ್ಞೆ ಯಾಕೋ ಪ ಸಂತಸದಿ ನಿನ್ನಂತರಂಗದಿ ಕಂತುಪಿತ ನೀನೆನಲು ಸಾಕೊ ಅ.ಪ ಕೋಪವ್ಯಾಕೊ ತಾಪವ್ಯಾಕೋ ತಾಪತ್ರಯಗಳ ಲೋಪ ಸಿರಿವರ ಕಾಪಾಡೆನಲದೊಂದೆ ಸಾಕೊ 1 ಕುಂದು ಯಾಕೋ ನಿಂದೆ ಯಾಕೋ ಸಿಂಧುಶಯನಗೋವಿಂದಗರ್ಪಿ ತೆಂದು ನೋಡ್ಹೆಚ್ದಿಂದ್ಯಾಕೆ ಬೇಕೊ 2 ಕ್ಷೇತ್ರ ಯಾಕೋ ಯಾತ್ರವ್ಯಾಕೋ ಖಾತ್ರಿಯಿಂದ ಜಗತ್ರಯಕೆ ಸು ಸೂತ್ರಾಧಾರಿಯೆಂದ ಮಾತ್ರ ಸಾಕೊ 3 ಸ್ನಾನವ್ಯಾಕೋ ಸಂಧ್ಯಾನವ್ಯಾಕೋ ಜ್ಞಾನವಿಡಿದು ಭಕ್ತಪ್ರಾಣನಾಥನ ಧ್ಯಾನಗೈಯಲದೊಂದೆ ಸಾಕೊ 4 ಜಪವು ಯಾಕೋ ತಪವು ಯಾಕೋ ಕಪಟನೀಗಪರಿಮಿತ ಹರಿಯ ಗುಪಿತದಿಂದರ್ಚಿಸಲು ಸಾಕೊ 5 ಮಂತ್ರವ್ಯಾಕೋ ತಂತ್ರವ್ಯಾಕೋ ಮಂತ್ರಮೂರ್ತಿ ಸರ್ವಾಂತರ್ಯಾಮಿಯ ಅಂತರಂಗ ತಿಳಿಯೆ ಸಾಕೊ 6 ನೇಮವ್ಯಾಕೋ ನಿತ್ಯವ್ಯಾಕೋ ಸ್ವಾಮಿಯೆನುತ ಪ್ರೇಮಿಯ ಶ್ರೀ ರಾಮನ ನಂಬಿಕೊಳ್ಳಲು ಸಾಕೊ 7
--------------
ರಾಮದಾಸರು
ಸ್ವಾಮಿ ನೀನಹುದೋ ಶ್ರೀಗುರು ಸಾರ್ವಭೌಮ ನೇಮದಿಂದಲಿ ಹೊರೆವ ದಯಗುಣನಿಸ್ಸೀಮ ಧ್ರುವ ಜಗತ್ರಯಕ ಜೀವಭಗತ ಜನಕಾವ ಸುಗಮ ಸುಪಥವೀವ ಸುಗುಣ ಶ್ರೀದೇವ 1 ದಾತ ದೀನದಯಾಳು ನೀನಹುದು ಶ್ರೀನಾಥ2 ನಿಜದಾಸರ ಪಕ್ಷ ಸುಜನರ ಸಂರಕ್ಷ ಗಜವರ ಸಮೋಕ್ಷ ಭಜಕರಿಗೆ ಸುಭಿಕ್ಷ 3 ತೇಜೋಮಯ ಸಾಂದ್ರ ನಿಜಸುಖ ಸಮುದ್ರ ರಾಜಾಧಿರಾಜ ಮಹಾ ರಾಜರಾಜೇಂದ್ರ 4 ಶರಣಜನಪಾಲ ಸಿರಿಯ ಸುಖಲೋಲ ತಗಳ ಮಹಿಪತಿ ಸ್ವಾಮಿ ನೀನಹುದೊ ಕೃಪಾಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು