ಕಾಲ ವ್ಯರ್ಥ
ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ
ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ-
ಗತಿಲೇ ಬಾಹರು ಇದನು ತಿಳಿಯೋ
ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ
ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1
ಇಂದೆ ಇದ್ದವ ನಾಳೆಗಿಲ್ಲಾ ಅದ
ರಿಂದ ಜಗದೀಶನನು
ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು
ಮುಂದೆ ನರಜನ್ಮ ಬರುವುದು ಭರವಸಲ್ಲಾ 2
ಸತ್ತ ನಂತರ ಬಳಗ ನಿನ್ನ ತೀವ್ರ
ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ
ಮಿಥ್ಯ ಸುಖಕೊಳಗಾಗದಿನ್ನಾ ಏಕ
ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3