ಮನವ ಶೋಧಿಸದೆಲೆ ಡಂಭದಿ ದಿನದಿನದಲಿ ಕರ್ಮಮಾಡೆ
ತನುವಿಗೆ ಬಲು ಕ್ಲೇಶವಲ್ಲದೆ ಅನುಕೂಲವೇನು ಪ
ಕಾಮಕ್ರೋಧ ಲೋಭಮೋಹ ಮದ ಮತ್ಸರಗಳನು ಬಿಡದೆ
ನಾಮಗಳನು ಬಳೆದು ಮರೆದರೆ ಶ್ರೀ ರಾಮನರಿಯನೆ 1
ಈಶ ಸೇವೆಗೆಂದು ಬಹಳ ಮೋಸದಿಂದ ಧನವ ಗಳಿಸಿ
ಈಶನನ್ನು ಮರೆವ ನರನನು ಜಗದೀಶನರಿಯನೆ 2
ಪರಸತಿಯರ ಸರಸಗಳಿಗೆ ಜರಿದು ಮನವ ಮರುಳು ಮಾಡೆ
ಸರಳತನದಿ ದಾನ ಮಾಡಲು ನರಹರಿಯು ಅರಿಯನೆ3
ಒಡಲು ಪೊರೆಯೆ ಸಡಗರದಲಿ
ಮಡಿ ಮಡಿಯೆಂದು ನುಡಿವ ಮೂಢನ ಪೊಡವೀಶನರಿಯನೆ4
ಪನ್ನಗಾರಿವಾಹನ ಪ್ರಸನ್ನವದನ ಕೃಷ್ಣಮೂರ್ತಿಯ
ಉನ್ನತ ಮಹಿಮೆಗಳನರಿತಗೆ ಇನ್ನೇನು ಬೇಕು 5