ಜ್ಞಾನವನ್ನೇ ತಿಳಿದುಕೋ ಮನುಜ ಜ್ಞಾನವನ್ನೇ ತಿಳಿದುಕೋ ಪ
ಸತ್ತು ಹುಟ್ಟಿಯೇ ಸತ್ತು ಮುಂದಣ ಜನ್ಮಕು ಮತ್ತುಮತ್ತು ಗಳಿಸಿಕೊಂಡು ವಿಪತ್ತು ಮತ್ತೆ ಬಂದಿದೆ ಮೃತ್ಯು 1
ಹಾದಿಯಿದೆ ಸಾಪು ಕಾಣದೆ ಬಿಡುವೆ ಆಪುಬಯಕೆ ಯೋನಿಯ ಕೂಪು ಹಾಕಿ ಹಾಕಿ ಭಾಪು 2
ಹಸಿವು ಬಿಡೋ ಹಸಿವು ಯಾಕೆ ಆದಿ ಪಶುವುಬಗುಳ ಬೇಡ ಹುಸಿಯು ನಾಚುತಿದೆ ಬಸಿರು3
ಹೆಚ್ಚ ಬೇಡ ಹೆಚ್ಚು ಅಹಂಕಾರ ಮುಚ್ಚುಓದಿಗೆ ಬೆಂಕಿಯ ಹಚ್ಚು ಮಾಡಿಕೊಂಡೆಯ ಕಿಚ್ಚು4
ಜ್ಞಾನವ ತಿಳಿಯಿನ್ನು ಯಮಗೆ ಕೊಡಬೇಡ ಬೆನ್ನುಆರುತಾನಿಹನೆನ್ನು ಚಿದಾನಂದನೆ ಎನ್ನ5