ಮುಟ್ಟು ದೋರಿತು ನಿನ್ನ ಗುಟ್ಟು ಹಾರಿತು ಪ
ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ
ಅಷ್ಟಸಿದ್ಧಿಗಳಿದ್ದರೂ ಒಂದಿಷ್ಟು ಕೊರತೆ ಕೃಷ್ಣನೆಂಬ ಅ.ಪ
ಹೇಯಗುಣವಿಲ್ಲ ಮುನಿಗೇಯ ನಿನ್ನೊಳೆಂಬ ಜನರ
ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ 1
ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ
ಮಿಥ್ಯಾವಚನಿಲ್ಲವೆಂಬೊಂದಿತ್ಯಧಿಕ ಕೊರತೆಯೆಂಬ 2
ಜ್ಷಾನವಂತನೆಯ ಬಹುಮಾನವಂತನಾದರೂ ಅ
ಜ್ಞಾನಶೂನ್ಯನೆಂಬ ದೊಡ್ಡ ಹಾನಿಯೊಂದಿರುವುದೆಂಬ3
ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ
ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ 4
ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ
ಪಾಪಗಳನಪಹರಿಪ ದೀಪನಾ ಬಿಡದು ಎಂಬ 5
ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರಿವ ನಿನಗೆ ಆ
ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ 6
ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ
ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ 7
ನಿತ್ಯತೃಪ್ತನಾದರೂ ನಿಜ ಭೃತ್ಯರನು ಪಾಲಿಸುವ
ನಿತ್ಯ ಕರ್ಮದಲ್ಲಿ ಕೃತಕೃತ್ಯನುನೀನಲ್ಲವೆಂಬ 8
ಕಷ್ಟಪಡಬೇಡವೆನ್ನೊಳೆಷ್ಟು ದುರ್ಗುಣಂಗಳಿಹ
ವಷ್ಟನು ಒಪ್ಪಿಸಿ ನಿನಗಿಷ್ಟ ನಾಗಬೇಕೆಂಬ 9
ಕ್ಷೀರದಧಿನವನೀತ ಚೋರನಾಗಿರಲಿ ಗೋಪೀ
ಜಾರನಾಗಿರಲಿ ಸಂಸಾರವೈರಿಯು ನೀನೆಂಬ 10
ಕೊರತೆಯೆಂಬಾ ಜನರಿಗೆಲ್ಲಾ ವರವನಿತ್ತು ಪೊರೆವೆನೆಂಬ
ಸ್ಥಿರವಾಗಿ ಶ್ರೀ ವ್ಯಾಘ್ರಗಿರಿಯೊಳಿರುವ ವರದ ವಿಠಲನೆಂಬ11