ಏಸುಪರಿ ಈಸಬೇಕೋ ಶ್ರೀಶದಾಸನೇ
ಮತ್ತೂರೇಶ ಭವಸಾಗರದಿ ಏಸುಪರಿ ಈಸಬೇಕೋ ಪ
ಕೂಸಿನಂಕದಿ ಬಾವು ಘಾಸಿಸುವ ಜ್ವರತಾಪನೋಸರಿಸಲೇಶ
ಸಮಯದಿಯೊದಗಲು ಲೇಶವಾದರು ಮಗುವಿನಾಸೆ ಇರದಿರೆ
ಪ್ರಾಣೇಶನೇ ಗತಿಯೆನಲು ಲೇಸುಮಾಡಿದೆ ಸ್ವಾಮಿ1
ಎನಿತೆಂದು ಹೇಳಲ್ಯ ನಿನಗೆ
ಮನದಳಲು ನೀಗಲಸದಳವಾಗಿ ಬಳಲುವೆನು
ತನುವಿನೀ ಸಂಕಟವ ತೊಲಗಿಸೈ ಜವದಿ 2
ದುರಿತ ದೂರಪುದು
ಭರದಿ ಎನ್ನೊಡೆಯ ಶ್ರೀರಾಮ ಪೊರೆವಾ
ಭವ ಕಿಚ್ಚಿನಿಂದುದ್ಧರಿಸಿ ಎನ್ನನು
ನರಸಿಂಹವಿಠ್ಠಲನ ನೆನೆಯೆ ಜಿಹ್ವೆಗನಿಸೊ 3