ಕಾಳಿಂಗನಾ ಮೆಟ್ಟೆ ನಾಟ್ಯವಾಡಿದ ಕಂಜನಾಭ ಕೃಷ್ಣನು ಪ
ಕಾಳಿಂಗನಾ ಮೆಟ್ಟಿ ಆಡಿದ ಭರದಲ್ಲಿಶ್ರೀವತ್ಸ ಉರದಲ್ಲಿ ಕೊರಳಲ್ಲಿ ವನಮಾಲೆತರಳತನದಲ್ಲಿ ಯಮುನೆಯ ಮಡುವಿನಲ್ಲಿಆಡುತ್ತ ಪಾಡುತ್ತ ಅ.ಪ.
ಕಾಲಲಿ ಗೆಜ್ಜೆ ಘಲುಘಲು ಘಲುಕೆನ್ನೆಫಾಲದಿ ತಿಲಕವು ಹೊಳೆ ಹೊಳೆಯುತ್ತಜ್ವಲಿತ ಮಣಿಮಯ ಲಲಿತ ಪದಕಹಾರಜ್ವಲಿತ ಕಾಂತಿ ಬೆಳಗುತ ದಿಕ್ಕುಗಳಲ್ಲಿ 1
ಸುರರು ತಥ್ಥೈತಥ್ಥೈಯೆನ್ನಲುನಾರದ ತುಂಬುರ ಸಿದ್ಧರು ವಿದ್ಯಾ-ಧರರು ಅಂಬರದಲ್ಲಿ ಆಡುತ್ತ ಪಾಡಲು 2
ಯೋಗಿಗಳೆಲ್ಲ ಜಯ ಜಯ ಜಯಯೆನ್ನೆಭೋಗಿಗಳೆಲ್ಲ ಭಯಭಯ ಭಯವೆನ್ನೆನಾಗಕನ್ಯೆಯರು ಅಭಯ ಅಭಯವೆನ್ನೆನಾಗಶಯನ ಸಿರಿಕೃಷ್ಣ ಜನನಿಯ ಕಂಡುಬೇಗನೆ ಬಿಗಿದಪ್ಪಿ ಮುದ್ದನು ತೋರಿದ3