ತನ್ನ ತಿಳಿಯದವನೇಕೆ ಇನ್ನವನನು ಸುಡಬೇಕು ಪ
ವೇದಾರ್ಥಿಯು ತಾನಾಗಿ ವಾದಿಸುತಿಹನೀ ಗೂಗೆಓದಿದ ಓದದು ವ್ಯರ್ಥ ಒಳ್ಳಿತಾಗಿ ಗಳಿಸಿದನರ್ಥ 1
ಆಚಾರದಿ ಒದ್ದಾಡಿ ಅಡವಿಯ ಹಿಡಿದನು ಖೋಡಿಕುಚಾಳಿಯೆ ವ್ಯವಹಾರ ಕುಮಂತ್ರಕೆ ಬಲು ಧೀರ 2
ಮಾನ್ಯರ ಕೋಪದಿ ಝಡಿವಾ ಅವಮಾನ್ಯರ ಕೊಂಡಾಡಿ ನುಡಿವಾಜ್ಞಾನದ ಹಾದಿಯ ಕಾಣ ಗೋಣಿಯ ಹೊರುವ ಕೋಣ3
ಮುಕ್ತಿಯ ತಿಳಿಯಲು ಬಾರ ಮುಂದಿನ ಭವಿತವ ನೋಡಭಕ್ತಿಯೆಂಬುದಿಲ್ಲ ಈ ಕತ್ತೆಗೇನು ಸಲ್ಲ 4
ಕಲ್ಲನೆ ದೇವರು ಎಂಬ ಕಡಮೆಯಲಿಲ್ಲವು ಎಂಬಒಳ್ಳಿತಲ್ಲವು ಅವನಿರವು ಒಲಿದವನೇ ಚಿದಾನಂದ ಗುರುವು 5