ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದ್ಹೇಳಲಿ ಸ್ವಾನುಭವದ ಸುಭೋಗ ಧ್ರುವ ಸುಖಗರುತದ ಶಿಖಾಮಧ್ಯ ಸಂತ್ರಾಧಾರಿ ಬೇಕಾದರೆ ನೋಡಿ ಷಕಚಕ್ರವೇರಿ ಏಕೋಮಯವಾಗ್ಯದ ವಸ್ತು ಒಂದೇ ಸರಿ ಲೋಕಪಾಲಕಸ್ವಾಮಿ ತಾ ಸಹಕಾರಿ 1 ಜುಮ್ಮು ಜುಮ್ಮುಗುಡುತದೆ ರೋಮಾಂಚಗಳು ಧಿಮಿ ಧಿಮಿಗುಡುತದೆ ನಾದಧ್ವನಿಗಳು ಕ್ರಮ ತಿಳಿದರೆ ಭಾಸುತದೆ ಸುಳಹುಗಳು ಸಂಭ್ರಮವಾದರು ಅನುಭವಿಗಳು 2 ಕಳೆ ಮಳೆಮಿಂಚು ತುಂಬೇದ ಬಲು ಬಹಳ ಹೊಳೆಯುತಲ್ಯದೆ ಸ್ವಸುಖದ ಕಲ್ಲೋಳ ಝಳಝಳಿಸುತ ಜ್ಯೋತಿರ್ಮಯ ಥಳಥಳ ತಿಳಕೊ ಮಹಿಪತಿ ಗುರುದಯದ ಸುಫಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ದ್ರುವ ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರಿ ಚೆಲ್ಯದೆ ನೋಡಿಹಸ್ವರೂಪ ತೋರುವ ಗುರುದೀಪ ಧ್ರುವ ಒಳಹೊರಗಿದು ಥಳಥಳಿಸುತಲಿಹುದು ಮೊಳೆಮಿಂಚಿನಕಳೆ ಝಳಝಳಿಸುತ ನಿಜ ಹೊಳೆಯುತಿಹುದು ಇಳೆಯೊಳಗಿಂದು ತಾ ಬೆಳಗಿನೊಳಿಹ ಘನ ಬೆಳಗಿನ ಪ್ರಭೆಯು 1 ಅನುದಿನ ನೋಡಿ ತುಂಬಿ ತುಳುಕುವದು ಮುನಿಜನ ನೋಡುವಾನಂದದ ಸುಖವಿದು ಘನಪರಬ್ರಹ್ಮಾನಂದದ ಬೆಳಗು 2 ಕಣ್ಣಿಗೆ ಕಾಣಿಸುತಿಹುದು ನೋಡಿ ಭಿನ್ನವಿಲ್ಲದೆ ಅಣುರೇಣುದೊಳೆಲ್ಲ ಧನ್ಯಗೈಸಿತು ಮಹಿಪತಿ ಜೀವನವಿದು ತನ್ನಿಂದಲಿ ತಾನೆ ತಾನೊಲಿದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು