ನೀರಿನೊಳು ಮುಳುಗುತಿರೆ ತೋರದಲಿ ಪೋಗುವರೆ
ಕರ ಪಿಡಿವರೈ ತೋರು ಶೌರೇ
ವಾರಿಜಾನಾಭ ಭಯ ತೋರುವರೆ ಕರುಣಾಳು
ಬಾರದಿರುವಂಥ ಅಪರಾಧವೇನೆಲೊ ಹರೀ ಪ.
ಪರಿ ಮನಸಿನೊಳಗೊಂದು ಪರಿ
ವನಜನಯನನೆ ಭಯವ ತೋರಿ ತೋರೀ
ಪರಿ ಏನೋ
ಬಿನಗುದೈವರ ಗಂಡ ಪರಿಹರಿಸು ಗಂಡಾ1
ಕರಿಯ ನೀರೊಳು ಕಾಯ್ದೆ ಪೊರೆದೆ ನೀರೊಳು ಮನುವ
ಧರಣಿ ಪ್ರಹ್ಲಾದರನು ಜಲದಿ ಸಲಹೀ
ಬಿರುದು ಪೊತ್ತವ ಎನ್ನ ಪರಿಯನರಿಯೆಯೆ ದೇವ
ಪೊರೆವರಿನ್ನಾರು ಹೇ ಕರುಣಾಳು ಶರಣೂ 2
ಮುಳುಗಿಹೆನು ಸಂಸಾರ ಗಣಿಸಲಾಗದ ಕರ್ಮ
ಕರವ ಪಿಡಿದೂ
ಧಣಿಸು ನಿನ ದಾಸತ್ವ ಧರೆಯೆ ಮೇಲ್ ಡಂಗುರದೀ
ಘಣಿಶಾಯಿ ಗೋಪಾಲಕೃಷ್ಣವಿಠಲ ಕೈಪಿಡಿದು 3