ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹದ್ದೇಹಿ ಭಟರಿಂದ ಯಮನಾಜ್ಞೆಯಂತೆ ಪ ಶರಣಜನನಿಂದಕಗೆ ಪರಮಕುಂಭೀಪಾಕ ಪರಮಭೀಕರಜ್ವಾಲೆ ಕರುಣಶೂನ್ಯರಿಗೆ ಪರನಾರಿಗಳುಕುವಗೆ ಮೂತ್ರ ರಕ್ತಾಮೇಧ್ಯ ಉರುಬಾಧೆ ಕರ್ಮದುರ್ಗಾ ಪರಮ ನೀಚರಿಗೆ 1 ಮಾತಾಪಿತದೂಷಕಗೆ ಪ್ರೇತಕ್ರಿಮಿಕುಂತ ಭಯ ಪಾತಕಗೆ ರಾಕ್ಷಸರ ಭೂತಕ್ರಮಿದೀರ್ಘ ಘಾತಕಗೆ ಉಗ್ರತರ ವ್ಯಾಘ್ರಮುಖ ಭಟ ಶಿಕ್ಷೆ ರೋತು ಮಲತ ಮಜ್ಜ ನೀತಿಬಾಹಿರಗೆ 2 ಕಂಚಿನ್ವಾಯಸ ನರಕ ಕೇಳಾ ಕಪಟರಿಗೆ ಪಂಚಮಹಾಪಾತಕರಿಗುಳಿವಿನ ಉರುನರಕ ಕೂಪ 3 ಕಾದ ಉಕ್ಕಿನ ಪ್ರತಿಮೆ ಕಾಮಾಂಧ ಮೂಢರಿಗೆ ಕಾದು ಉರಿವರಗಿನೂಟ ಕಡುಲೋಭಿಗಳಿಗೆ ಕಾದ ಸೀಸದ ಮಡುವು ಮನೆಮುರುಕ ತುಂಟರಿಗೆ ಕಾದೆಣ್ಣೆಕೊಪ್ಪರಿಗೆ ಕುಟಿಲ ಕುಹಕರಿಗೆ 4 ಪರದ್ರವ್ಯಪಹಾರಿಗೆ ಭೇದಿ ಭೈರವಕೂಪ ನೆರೆನಂಬಿ ಕೊಲ್ಲವಗೆ ಮಸೆದಲಗುಕೊಡಲಿ ಪರರೊಗತನರಿದಗೆ ನರಕ ಚಂದ್ರಾರ್ಕಪರಿ ಗುರು ಹಿರಿಯರ್ಹಳಿದರಿಗೆ ಉರಿಸರಳ ಮಂಚ 5 ಕಾಲಯಮಪಾಶವು ತುಳಸಿದಳ ತುಳಿದವರಿಗೆ ಕಾಲಭೈರವ ಮೃತ್ಯು ಮಾಯಮೋಹಿಗಳಿಗೆ ಕಾಲಕರ ಶೂಲ ಕೊಂಡಿ ಚಾಂಡಾಲಗೆ ಸೂಳೆಯರ ಸೇವಕಗೆ ಕಾಲಯಮದಂಡ 6 ಸಂತ ಸಜ್ಜದಾನಸಂಗರಿಯದಧಮರಿಗೆ ಇಂತು ಎಂಬತ್ತು ಕೋಟಿ ನರಕಯಾತನವು ಅಂತಕಾರಿ ನಿನ್ನಾಜ್ಞೆಯಂತೆ ನಡೆಯುತಿವೆ ಎನ್ನ ಅಂತರದಿ ನಿಂತಿದನು ಗೆಲಿಸು ಶ್ರೀರಾಮ7
--------------
ರಾಮದಾಸರು