ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಟ್ಟು ಮಾಡುವುದೆಂದಿಗು ಸಲ್ಲ ಪೂರ್ಣ ಸಿರಿನಲ್ಲ ಪ. ಮೋಹ ಪಾಶ ಮಿಕ್ಕು ಬಿಗಿದಿಹುದು ರಿಪು ವ್ಯೂಹ ಸುತ್ತಮುತ್ತ ನೆಗದಿಹುದು ದೇಹದಿ ದಿನದಿನ ಬಲಕುಂದಿ ಬಂತು ಚಿ- ದ್ದೇಹ ನೀನೊಲಿವ ಸನ್ನಹಗೊಳ್ವದೆಂತೊ 1 ಒಂದು ಸತ್ಕರ್ಮ ಸಾಧಿಸುವಲ್ಲಿ ಬೇಗ ಪಾತಕ ಝಲ್ಲಿ ಮಂದರಧರ ಮಧುಸೂದನ ಮನದಿ ನೀ ನಿಂದು ಸಾರ್ಥಕ ಮಾಳ್ಪ ತೆರವೆಲ್ಲ ಬಲ್ಲಿ 2 ಹಿಂದೆ ಮುಂದಿನ ಸರ್ವ ಕರ್ಮಫಲ ಎನ್ನ ತಂದೆ ಸ್ವೀಕರಿಸಿ ಮಾಡಿಸು ನಿರ್ಮಲ ಇಂದಿರೇಶ ವೆಂಕಟೇಶನೆ ತ್ವಚ್ಚರ- ಣೆಂದೀವರ ನೆರಳಿರಿಸನುಗಾಲ 3
--------------
ತುಪಾಕಿ ವೆಂಕಟರಮಣಾಚಾರ್ಯ