ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಮಂಗಳೆಂದು ಪಾಡಿರೆ ಶ್ರೀರಂಗನಾಥಗೆ ಲಕ್ಷ್ಮೀರಂಗನಾಥಗೆ ಮಂಗಳಪುರಿ ಜಾಲ ಹಳ್ಳಿರಂಗ ನಿಲಯಗೆ ಬ್ಯಾಗೆ ಪ ಅಂಗನೆಯರು ಶೃಂಗಾರದಿ ಸಂಗೀತಪ್ರಿಯಗೆ ಮಂಗಳಾಂಗ ದೇವಗೆ ಮಾತಂಗವರದಗೆ ಬ್ಯಾಗೆ 1 ಇಂದಿರವರ ಮಂದರೋದ್ಧರ ನಂದಕುವರಗೆ ಹಿಂದಕೆ ಮುದಗಲ್ಲು ಪುರದಿ ಬಂದು ನಿಂದಗೆ ಬ್ಯಾಗೆ 2 ದಾರಿಯೊಳು ಉಪ್ಪಾರಜನರ ಸೇರಿಬಂದವಗೆಸಾರಿದವರ ಪೊರೆವ 'ಕಾರ್ಪರ ನಾರಶಿಂಹಗೆ' ಬ್ಯಾಗೆ 3
--------------
ಕಾರ್ಪರ ನರಹರಿದಾಸರು
ಮಂಗಳಂ ನರಶಿಂಗ ಮೂರುತಿಗೆ ಲಕ್ಷ್ಮೀಸಮೇತಗೆ ವಿಹಂಗ ವಾಹನಗೆ ಅಂಗಜನಪಿತಗೆ ಅಂಗುಟದಿ ಗಂಗೆಯನು ಪಡೆದವಗೆ ಮಾ ತಂಗವರದಗೆ ಪ ವಾರಿಜಾಸನ ಮುಖ್ಯಸುರನುತಗೆ ಉ- ದಾರ ಚರಿತಗೆ ಸೇರಿದವರಘದೂರ ಮಾಡುವಗೆ ಕಾರ್ಪರ ಋಷಿಗೆ ಘೋರ ತಪಸಿಗೆ ಒಲಿದು ಬಂದವಗೆ ಅಶ್ವತ್ಥ ರೂಪಗೆ 1 ಕುಕ್ಷಿಯೊಳು ಜಗವಿಟ್ಟು ರಕ್ಷಿಪಗೆ ಕರುಣಾಕ- ಟಾಕ್ಷಗೆ ವಕ್ಷದೊಳು ಶ್ರೀ ವತ್ಸಲಾಂಛನಗೆ ದ್ರೌಪದಿ ದೇವಿಗೆ ಅಕ್ಷಯಾಂಬರವಿತ್ತು ಸಲಹಿದಗೆ ಲಕ್ಷ್ಮೀನೃಸಿಂಹಗೆ 2 ಕೃಷ್ಣವೇಣಿ ತಟವಿರಾಜಿತಗೆ ಸೃಷ್ಟ್ಯಾದಿ ಕರ್ತಗೆ ಶ್ರೇಷ್ಠತರು ಪಿಪ್ಪಲದಿ ಪ್ರಕಟಿತಗೆ ದುಷ್ಟನಿಗ್ರಹಗೆ ದ್ಯಷ್ಟ ಬಾಹುಗಳಿಂದ ಭಜಕರಿಗೆ ಇಷ್ಟಾರ್ಥಗರಿವಗೆ 3 ಹಿಂದೆ ಗೋರೂಪದಲಿ ಬಂದವಗೆ ಬಹುಸುಂದರಾಂಗಗೆ ವಂದಿಸುವೆ ಶೀ ವೇಂಕಟೇಶನಿಗೆ ಮಂದರೋದ್ಧರಗೆ ಭವ ಬಂಧ ಬಿಡಿಸುವಗೆ ಆನಂದವೀವಗೆ 4 ತರುಳ ಪ್ರಹ್ಲಾದನ್ನ ಕಾಯ್ದವಗೆ ಸುರಸಾರ್ವಭೌಮಗೆ ಶರಣು ಜನ ಮಂದಾರನೆನಿಸುವಗೆ ಭೂಸುರರ ಪೊರಿವಗೆ ಧರಣಿಯೊಳು ಕಾರ್ಪರ ಸುಮಂದಿರಗೆ ಶಿರಿನಾರಶಿಂಹಗೆ 5
--------------
ಕಾರ್ಪರ ನರಹರಿದಾಸರು