ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ
ಸೂಸುವದ್ಯಾತಕೆ ಹರಿಭಕುತಿಗೆ ಧ್ರುವ
ಬಲಮುಣುಗುವದಿದ್ಯಾಕೆ
ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ
ತಲೆ ಮುಸಕ್ಯಾತಕೆ
ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1
ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ
ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ
ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ
ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2
ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ
ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ
ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3
ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ
ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ
ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ
ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4
ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ
ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ
ಸಾರ ಯೋಗಿ ಮಾನಸಜೀವನ
ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5