ಇದು ಏನು ಚರಿಯಾ ವೆಂಕಟರಾಯ ಇದು ಏನು ಚರಿಯಾ ಪ ಇದು ಏನು ಚರಿಯಾ ಶ್ರೀಯದುಕುಲ ತಿಲಕನೆ ಸದನತ್ರಯವ ಬಿಟ್ಟು ಹುದುಗಿಕೊಂಡಿರುವುದು ಅ.ಪ ಕನಕಪರ್ವತದಲ್ಲಿ ದಿನದಿನ ಮಾಡುವ ಘನ ಪೂಜೆಯನೆ ನೀನೆನಿಸದಿರುವುದು 1 ಪೊಂಬಣ್ಣಾಂಬರವುಟ್ಟು ಹೊಂಬಣ್ಣಾಂಬರವಿಟ್ಟು ಕಂಬೆಣ್ಣೆಯನೆ ಬಿಟ್ಟು ದಿಗಂಬರನಾಗಿದ್ದು 2 ಬುತ್ತಿ ಮೊದಲಾದ ಉತ್ತಮನೈವೇದ್ಯ ಹೊತ್ತಿಗುಂಬೋದು ಬಿಟ್ಟು ತುತ್ತುಗಾಣದಿರುವೋದು 3 ಭಾಗ್ಯವಂತನು ನೀನು ಭಾಗ್ಯರೂಪಳು ರಾಣಿ ಭಾಗ್ಯತನವ ಬಿಟ್ಟು ನಿರ್ಭಾಗ್ಯನಾಗಿರುವೋದು 4 ದಾತಗುರುಜಗನ್ನಾಥ ವಿಠಲ ಜಗದಿ ನಾಥನಾಗದೆ ಅನಾಥನಾಗಿರುವೋದು 5
ಏನ ಮಾಡಿ ತೀರುವೆ ಸದ್ಗುರುನಾಥಗೆ ಏನಮಾಡಿ ತೀರುವೆನೀನೆಯು ಬ್ರಹ್ಮವೆಂದು ಯನ್ನಕೈಯಲಿ ಹಿಡಿದು ಕೊಟ್ಟ ಪ ವೇದಕ್ಕೆ ನಿಲುಕದಿಹ ಷಣ್ಮತಗಳ ವಾದಕ್ಕೆ ತೋರದಿಹನಾದಕ್ಕೆ ಬೇರಿಹ ನಾಮರೂಪವಳಿದಿಹಆದಿಯು ನೀನೆಯೆಂದು ಯನ್ನಕೈಯಲಿ ಪಿಡಿದು ಕೊಟ್ಟ 1 ಬುದ್ಧಿ ಮನಕೆ ಹೊರತಾ ತತ್ವಂಗಳಲಿದ್ದ ಗುಣಕೆ ಅತೀತಶುದ್ಧ ಬ್ರಹ್ಮವು ನೀನು ಸಿದ್ಧಾ ಸಿದ್ಧಾಂತೆಂದುಮುದ್ದಿಸಿ ನಿನ್ನನು ಎನ್ನ ಕೈಯಲಿ ಹಿಡಿಕೊಟ್ಟ2 ಕಾರ್ಯ ತನುವ ಧರಿಸಿ ಜನ್ಮ ಜನ್ಮಾದಿ ತೋರುವ ಜೀವವೆನಿಸಿಕಾರ್ಯ ಕಾರಣಾತೀತನಾದ ಚಿದಾನಂದನು ಬೇರಿಲ್ಲನೀನೇ ಎಂದು ಎನ್ನ ಕೈಯಲಿ ಹಿಡಿದು ಕೊಟ್ಟ 3