ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ
ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1
ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2
ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3