ತನ್ನ ಸ್ಮರಣೆ ತಾನರಿಯದ ಮನವು
ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ
ಹಾವಿನ ಹೆಜ್ಜೆಯ ಹಾವರಿವಂದದಿ
ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ
ಗೋವಳನಿಲ್ಲದ ಗೋವಿನ ತೆರನಂತೆ
ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1
ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ
ಚಿನ್ನವಾರಿಕೆಯನ್ನು ಮಾಡುವ ಪರಿಯು
ನಗದ ಮನ
ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2
ಹೇಳಿದ ಮಾತನು ಕೇಳಿ ಮಾನಸದೊಳು
ಮೇಳವಾಗುವೆನೆಂದು ಖೂಳತನದಿ ಪೋಗಿ
ಕೇಳಿದ ಉತ್ತರಕುತ್ತರ ಹರಿಸದೆ
ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3
ಕಾಗೆಯು ಗರುಡನ ಸರಿಯೆಂದು ಜೂಜಾಡಿ
ಸಾಗರವನು ಹಾರಿ ನಡುವೆ ಬಿದ್ದಂದದಿ
ಯೋಗಿಯ ಪರಿಯಂತೆ ತಪವೆಂದು ತನ್ನಯ
ಮೂಗ ಮುಚ್ಚಲು ಭವರೋಗ ಹಾರುವುದಂತೆ 4
ಮೀಸಲಿಗೊದಗುವ ಶೇಷಗಿರೀಶನ
ಆಸೆಯಗ್ರಾಸವ ಬೇಡಿಕೊಳ್ಳದ ಮನ
ಸಾಸಿರ ವೆಗಡದ ಭಾಂಡದೊಳೋಗರ
ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5
ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ
ಪ್ರಸ್ತುತಕೊದಗುವದೆನುತಿಹ ರಾಯನ
ಮುತ್ತಿಕೊಂಡಿಹ ಪರಸೇನೆಯ ಇದಿರೊಳು
ಮೃತ್ಯುದೇವತೆ ಬಂದು ಮೂದಲಿಸುವಳೆಂದು6
ಮೊಸರನ್ನ ತನ್ನ ಕೈಯೊಳಗಿದ್ದಂತೆ
ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ
ಕುಶಲದಿ ನೆನೆಯಲು ಹಸನದಿ ಸಲುಹುವ 7