ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ
ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1
ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2
ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3