ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ