ಮಾರ್ಗವೇ ಕಾಣಿಸದು ವೈಕುಂಠಕೆ
ಪೇರ್ಗಿರಿಗಳ ದಾಂಟಲಾರ್ಗಳವೋ ಕಾಣೆ ಪ
ಭೋರ್ಗರೆವುದು ಬಲಮಾರ್ಗದಿ ಜಲನಿಧಿ
ಕಾರ್ಗಡಲು ಎಡ ಮಾರ್ಗದಿ ಕಗ್ಗತ್ತಲೆ ಅ.ಪ
ಹಿಂದೆ ಮೃಗಂಗಳ ಸಂದಣಿಯಾರ್ಭಟ
ದಿಂದ ಮನದ ದೈರ್ಯಕುಂದಿದುದಕಟ ಮ
ಹಾಂಧಕೂಪದೊಳೆನ್ನ ಎದೆ ಕುಸಿದು
ಬಂಧಿಸಿತೆನ್ನ ಕಾವ ಬಂಧುಗಳಿಲ್ಲ 1
ಕೂಪದಿ ಕ್ರಿಮಿಗಳು ಕೋಪಿಸಿ ತನುವನು
ಈ ಪರಿಯೆಲ್ಲವು ತಾಪತ್ರಯಂಗಳ
ಧೂಪ ದೀಪಗಳ ಪಾಪದ ಫಲವೋ 2
ದಡವನು ಕಾಣದೆ ತಡಬಡಿಸುವೆನೋ
ಮೃಡನು ತಾ ಮಾಂಗಿರಿಯೊಡೆಯ ಶ್ರೀರಂಗ
ಕಡುಪಾತಕಿಯ ಕೈಹಿಡಿದೆತ್ತಿ ಕೃಪೆಯಿಂದ
ತಡಿಗೆ ಸೇರಿಸಿ ನಿನ್ನ ಅಡಿಯಪಿಡಿಸೋ ದೇವಾ 3