ನಡೀರೇ ನೋಡುವಾ ಗುರುಮೂರ್ತಿಯಾ | ಮಹಿಪತಿಯಾ |
ತಡೆಯದೇ ಸಖಿಯರು ಪ
ಪೊಡವಿಯೊಳಾನಂದ ಸ್ಥಿತಿಯಾ | ವರ ಯತಿಯಾ |
ಅಡಿ ಕಮಲವ ಪಿಡಿದು | ಜಡಿದಿಟ್ಟು ಸದ್ಭಾವರತಿಯಾ |
ಕರ ಮುಗಿದು 1
ಷೋಡಶ ಪರಿಸೇವೆ ಮಾಡುವಾ | ಪಾಡುವಾ |
ನೋಡದೆಲೆ ಎಡ ಬಲವಾ |
ಪಡ ಕೊಂಬಷ್ಟು ಸುಖವಾ 2
ಶರಣ ಬಂದ ವರಂಗೀಕಾರವಾ |ಮಾಡಿ ಹೊರವಾ |
ದೋರಿ ಸನ್ಮಾರ್ಗ ಪೂರ್ಣಾ | ವರನಿಗಮದರ್ಥ ಸಾರವಾ |
ನೋಡಿ ಬೀರುವಾ | ಕರುಣಿಪ ಕೃಷ್ಣನ ಪ್ರೀಯನಾ3