ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

( ನಿಂದಾಸ್ತುತಿ) ಬಹುಲೋಭಿಯೋ ನೀನು ಮುರಹರ ಪ ವರವೇನನೀವೆಯೆನಗೆ ವಿಹಿತದಿ ಪೊರೆ ಮಂದಾರ ಅ.ಪ ಹಾಸಿಕೊಳ್ವ ವಾಸುಕಿಯ ಬೀಸಿ ಬರುವ ಗಾಳಿ ಕುಡಿವ ವಾಸುದೇವನೆ ವಾಹನನ ಪನ್ನಗಾಸನನಾಗಿರುವನಲ್ಲವೆ 1 ಹೆಂಡತಿಯಾಗಿರುವ ಸಿರಿಯಂ ಕಂಡಕಂಡರ ಮನೆಗೆ ಕಳುಹಿ ಮಂಡಿಸುತ್ತ ಭಕ್ತರ ಗೃಹದೊಳುಂಡುಂಡು ತಣಿಯುತಿರುವೆ 2 ವ್ಯಯ ಮಾಡದೆ ಕೈಯಕಾಸ ನಯದಿಂದಲೆ ನಡೆದುಕೊಂಡು ಜಯ ಜಯ ಧಾರಾಳಿಯೆನಿಪ ಜೀಯ ಜನಾರ್ಧನ ಜಾಜಿಕೇಶವ3
--------------
ಶಾಮಶರ್ಮರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಕಂಡೆ ನಾಕಂಡೆ ನಾಕಂಡೆ ಕಾಳಿಂಗನ ಮಂಡೆಯಮೇಲೆ ಕುಣಿವ ಕೃಷ್ಣನ್ನ ಪ ತಕ ತಕ ಧಿಮಿ ಧಿಮ್ಮಿ ಧಿಮ್ಮಿ ಧಿ- ಮ್ಮಿಕೆಂದು ಕುಣಿವ ಕೃಷ್ಣನ್ನ ನಾಕಂಡೆ ಅ.ಪ ಹೆಡೆಯ ಮೇಲೆ ತಾ ಎಡಗಾಲಿರಿಸಿ ಎಡಗೈಯಲಿ ಬಾಲ ಹಿಡಿದವನ ಬಿಡದೆ ಅಭಯಹಸ್ತವ ತೋರೊ ಒಡೆಯ ಕೃಷ್ಣಮೂರುತಿಯ ನಾಕಂಡೆ ಸ್ವಪ್ನದಲಿ ನಾಕಂಡೆ ಕಂಡೇನೊ ಸಂಪನ್ನಮೂರ್ತಿಯ ಕಂಡೇನೊ 1 ಗೋವಲರ ಮನೆಯ ಪಾಲುಂಡವನ ಗೋವುಗಳ ಕಾಯ್ದ ಗೋಪಾಲನ್ನ ಗೋವಿಂದನೆಂಬ ದೇವರದೇವನ್ನ ಓವಂತೆ ನಾನು ಕಂಡೇನು ಕಂಡೇನು ಕುಣಿಯುತ ಬಂದ ಕೃಷ್ಣನ್ನ ತಣಿಯುವ ಹಾಗೆ ನೋಡಿದೆನು 2 ಗೋವಿಂದನಾಗಿ ತಲೆಕಾಯ್ವವನ ಗೋವರ್ಧನವನೆ ಕೊಡೆಯಾದವನ ಗೋವನಿತೆಯರ ಮಾಮಾಯನನ್ನ ಅವ್ವಯ್ಯ ಚೆನ್ನಾಗಿ ಕಣ್ತುಂಬ ಕಂಡೆ ಆ ಮುದ್ದು ಬಾಲಕೃಷ್ಣನ್ನ ಕಂಡೆ ಸಾಮುದ್ರಿಕಾ ಸಿರಿಯನ್ನಕಂಡೆ 3 ಅಸುರ ಕಂಸನ ಅಸುವನ್ನು ನೀಗಿದನ ಬೆಸೆದ ಕುಬ್ಜೆಯ ಡೊಂಕ ತಿದ್ದಿದವನ ಅಸುತೆಗೆಯ ಬಂದವಳ ಅಸುವನೆ ಹೀರಿದನ ಮಿಸುಕದಂತೆ ಕಂಡೆ ನಾಕಂಡೆ ನಾಕಂಡೆ ಜಾಜಿಪುರೀಶನ ಕಂಡು ಧನ್ಯನಾದೆ ಸಾಜದಿ ದಾಸಾನುದಾಸನಾದೆ 4 ಪಾಪಿನಾ ಕರುಣೆಯ ತೋರಿ ಸಲಹೊ ಭಾಪುರೆ ಗಟ್ಟಿಸುವ ಪುಟ್ಟಪಾದವಿಟ್ಟು ಮೋಪಾಗಿ ಮೆರೆವ ದುಷ್ಟರ ಮೆಟ್ಟೊ ಪುಂಡರ ಪುಂಡರಿಗೆ ಪುಂಡನಾದವನೆ ಪುಂಡರೀಕಾಕ್ಷ ಚನ್ನಕೇಶವನೆ 5
--------------
ನಾರಾಯಣಶರ್ಮರು
ನಿಲುನಿಲು ಘನಲೀಲಾ ನಲಿನಲಿ ಗೋಪಾಲ ಪ ಕಿಲಕಿಲನಗು ಬಾಲಾ ಒಲಿಒಲಿ ಶ್ರೀಲೋಲಾ ಅ.ಪ ಅಡಿಯಿಡು ಸಡಗರದಿ ನುಡಿನುಡಿ ಕಡುಮುದದಿ ಪಿಡಿಕೊಳಲನು ಕರದಿ ನುಡಿಸಿ ಮುದ್ದಾಡುವೆ ನಾನು 1 ತೊದಲುನುಡಿಗೆ ನಲಿವೆನು ಬಾ ಬಾ ಚದುರತನವ ನೀ ತೋರುತೆ ಬಾ ಬಾ ಮುದದಿ ಕುಣಿಯುತೆ ಮಣಿಯುತೆ ಬಾ ಬಾ ಇದೆಗೋ ಎತ್ತಿಕೊಂಡೊಯ್ವೆನು 2 ಜೋಗುಳಗಳ ಹಾಡಿ ರಾಗದಿ ಕೊಂಡಾಡಿ ಬಾಗಿ ಬಿಗಿದು ಕುಣಿದಾಡಿ ನಾಗಸಂಪಿಗೆ ಸೂಡಿ3 ಸಂತಸದಿಂದೋಡು ಅಂತರಿಕ್ಷವ ನೋಡು ಕಂತುಕವೆಸೆದಾಡು ಶಾಂತಿಯ ಮನಕೆ ಕೊಡು 4 ಚಂದಿರನಂದದ ಕಂದಾ ನೊಂದಿಹ ಮನಕಾನಂದಾ ಸುಂದರ ಮುಖಾರವಿಂದಾ ಅಂದದ ನಗು ಮಿಗಿಲಾನಂದಾ5 ಗೋಲಿಯನಾಡುವೆ ಬಾ ಗಾಲಿಯನೋಡಿಸು ಬಾ ಬಾಲಭಾಷೆಯ ಪೇಳುವ ಬಾ ಲೀಲೆಯನೀಕ್ಷಿಸಿ ದಣಿವೆ 6 ಕುಣಿ ಕುಣಿ ಅರಗಿಣಿಯೆ | ಅಣಕಿಸು ಮನದಣಿಯೆ ಮಣಿ ಕಣ್ಮಣಿಯೆ | ತಣಿಯುವ ಮನಕೆಣೆಯೆ7 ಬಣ್ಣದ ಹೂಮುಡಿವೆ ಹಣ್ಣನು ಮೆಲಗುಡುವೆ 8 ನೊರೆಹಾಲ್ಕುಡಿ ನೀಲಾಂಗ ಮರೆಹೊಕ್ಕರ ಪೊರೆ ರಂಗಾ ಕರುಣಿಸೊ ಶಿರಬಾಗುವೆನಾಂ ಮಾಂಗಿರಿಯ ರಂಗಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಗ ತಿಳಿಯೈ ಶುದ್ಧ ಮನದಿ ಶ್ರೀಗುರು ಪೇಳ್ದ ಬೋಧಾ ನೀಗುವಿ ಭವದಾ ಭಾಧಾ ಸ್ವರೂಪಾ ನಂದ ಪಡೆಯುವಿ ನೀ ಸ್ವರೂಪಾ ಪ ಪರಮಸತ್ಯದ ತತ್ವವರಿಯಲು ಮರಣಭಯವಾ ನೀಗುವೀ ಕರುಣಿ ಗುರುವಿನ ಚರಣಕಮಲದಿ ಬೆರೆತು ಸುಖಿಸುವಿ ನೀ ಸ್ವರೂಪಾ 1 ಅರಿಯೊನೀ ಪರಮಾತ್ಮನೆಂಬುದ ಪರಮ ಶಾಂತಿಯ ದೊರಕಿಸೀ ಗುರುಶಂಕರನಾ ಬೋಧದಾ ಸವಿಯುಂಡು ತಣಿಯುವಿ ನೀ 2
--------------
ಶಂಕರಭಟ್ಟ ಅಗ್ನಿಹೋತ್ರಿ