ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಟಪಟ ನಾ ಸಟೆಯಾಡುವೆನಲ್ಲ |ವಿಠಲನ ನಾಮ ಮರೆತು ಪೋದೆನಲ್ಲ ಪ.ಶೇಷಗಿರಿಯ ಮೇಲೆ ಸವುತೆಯ ಬಿತ್ತಿ |ದೇವಗಿರಿಯ ಮೇಲೆ ಅವತಾರವಿಕ್ಕಿ ||ಹಾಳೂರಿಗೊಬ್ಬ ಕುಂಬಾರ ಸತ್ತ |ಗೋಕರ್ಣದೊಳಗೊಬ್ಬ ಪರದೇಶಿ ಅತ್ತ 1ನಾ ಸಮಯದಿ ಮೂರು ರಾಯರ ಕಂಡೆಕುಪ್ಪುಸ ತೊಟ್ಟ ಕೋಳಿಯ ಕಂಡೆ ||ಬೆಳ್ಳಕ್ಕಿ ಬೆರಣಿಯ ಮಾಳ್ಪುದ ಕಂಡೆ |ನರಸೂಳೆಗೆಯ್ವುದ ಕಣ್ಣಾರೆ ಕಂಡೆ 2ನುಸಿಯೊಂದು ರೊಟ್ಟಿಯ ಸುಡುವುದ ಕಂಡೆಆಡೊಂದು ಮದ್ದಳೆ ಬಡಿವುದ ಕಂಡೆ ||ಕಪ್ಪೆ ತತ್ಥೈಯೆಂದು ಕುಣಿವುದ ಕಂಡೆ |ಪುರಂದರವಿಠಲನ ಕಣ್ಣಾರೆ ಕಂಡೆ * 3
--------------
ಪುರಂದರದಾಸರು