ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ತತ್ವಮತವೇ ಮತವು ಸಾತ್ತಿ ್ವಕರಿಗೆ ಪ ನಿತ್ಯ ನಿರ್ಮಲರಾದ ಮುಕ್ತಿಜೀವರಿಗೇ ಅ.ಪ ಶ್ರೀವನಿತೆ ಮತಿಗೆ ವಾರಿಜಸಂಭವಾ ಆವಂಗಜರಿಪು ಮನಕೆ ಅಹಂಕಾರದಲಿ ಯೀವಿಧ ದಶೇಂದ್ರಿಯಕೆ ಸೂರ್ಯಾದಿಗಳು ಎಂಬೋ 1 ಪಂಚಭೇದವನು ತರತಮಗಳನು ತಿಳಿಯುತಂ ವಂಚನಾದಿಗಳಿಂದ ರಹಿತರಾಗಿ ಪಂಚ ಸಂಸ್ಕಾರದಿಂ ಪರಿಶುದ್ಧರಾಗುತೆ ಪ್ರ- ಪಂಚವನು ದಾಟಿರುವ ಪರಮ ಭಕ್ತರಿಗೆ 2 ವನ್ನು ಒಂದೇ ಬಗೆಯ ಗೈದು ಮುದದಿ ಪನ್ನಗಾದ್ರಿನಿವಾಸ ಗುರುರಾಮ ವಿಠಲನ ಅ- ಹರ್ನಿಶಿಯು ಬಿಡದೆ ಪೂಜಿಸುವ ಸುಜನರಿಗೆ 3
--------------
ಗುರುರಾಮವಿಠಲ
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ