ಹಸಗೀಡಾಗದಿರು ಮನವೆ
ವಿಷಯವಾಸನೆ ಕೂಡ ಧ್ರುವ
ಸತ್ಯವೆಂದೆನಬ್ಯಾಡ ದೃಶ್ಯ ಮಿಥ್ಯಾಮಾಯದ ಮೋಡ
ನಿತ್ಯವಾಗಿಹದ ಸತ್ಯ ಸುಪಥ ಕೂಡೊ 1
ಹೊನ್ನು ಹೆಣ್ಣಿನ ಕೂಡ ನೀ ದಣ್ಣನೆ ದಣಿಬ್ಯಾಡ
ಸುಣ್ಣ ಸಾರಿಸಿ ಮ್ಯಾಲೆ ಬಣ್ಣದೋರುವದಕ್ಕೆ ಕಣ್ಣಗೆಟ್ಟಿರಬ್ಯಾಡ
ಮಣ್ಣೆÀಂದರಿಯದೆ ಕಣ್ಣಗೆಟ್ಟಿರಬ್ಯಾಡ 2
ಗುಹ್ಯಗೂಢವ ತಿಳಿಯೊ ನಾ ದೇಹವೆಂಬುದನಳಿಯೊ
ತಿಳಿದು ನೋಡೊ
ಶ್ರೀ ಹರಿಯ ಮಹಿಮೆ ಸೋಹ್ಯ ತಿಳಿದು ನೋಡೊ 3