ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣವೇಕೆ ಬಾರದಯ್ಯಾ ಕರಿವರದನೆ ಪ ಶರಣ ರಕ್ಷಕನೆಂದು ನಿನ್ನ ಮೊರೆಯ ಹೊಕ್ಕೆನೊ ಸರಸಿಜಾಕ್ಷ ಮರಣ ಕಾಲದಿ ಮಗನ ಕರೆದ ಪುರುಷ ಪುಣ್ಯ ಶರಧಿಯೇನೊ ಅ.ಪ. ತುತಿಸಸಲಿಲ್ಲವೆಂದು ಎನ್ನ ಹಿತವಗೈಯದೆ ಜರಿಪರೇನೊ ತುತಿಸಲಾಪವೇ ಶ್ರುತಿಗಳನ್ನು ಮಿತಿಗೆ ಸಿಲ್ಕದ ನಿನ್ನ ಮಹಿಮೆ 1 ಏನು ಸಾಧನವವÀ ಮಾಡಲಿಲ್ಲವೆಂದು ಕೈಬಿಡುವೆಯೇನೊ ನೀನು ದಯಮಾಡಿದಲ್ಲದೆ ಏನು ಸಾಧನ ಮಾಡಲಾಪೆನೊ 2 ಪಾಪಪುಣ್ಯ ಕರ್ಮಗಳಿಗೆ ನೀನೆ ಪ್ರೇರಕನಲ್ಲವೇನೊ ಶ್ರೀ ಪರಾತ್ಪರ ನೀ ಸ್ವತಂತ್ರ ನಾ ಪರಾಧೀನನಲ್ಲವೆ 3 ಪುಣ್ಯಗೈದವರಲಿ ಕರುಣವನು ಗೈವುದೇನು ಮಹಿಮೆ ಘನ್ನ ಪಾಪಿಗಳಲಿ ನೀ ಪ್ರಸನ್ನನಾಗಲು ಖ್ಯಾತಿಯಲ್ಲವೆ 4 ಪತಿತಪಾವನ ದೀನರಕ್ಷಕ ಶ್ರಿತ ಜನಮಂದಾರನೆಂಬ ವಿತತ ಬಿರುದು ಬರಿದೆ ಪೇಳೋ ಗತಿ ಪ್ರದಾಯಕನಲ್ಲವೇನೊ 5 ದುರಿತ ರಾಶಿ ನೋಡಿ ಬೆದರಿ ನಿಂತೆಯೇನೊ ನೀನು ದುರಿತ ದೂರನಲ್ಲವೇ ನಿನ್ನ ಸ್ಮರಣೆ ನೋಡದ ದುರಿತವಿಹುದಿ 6 ತರಳತನದ ಸಲಿಗೆಯಿಂದ ಪರಿಪರಿಯಲ್ಲಿ ನುಡಿದೆನಯ್ಯಾ ಪರಮ ತತ್ವವರಿಯೆ ನಾನು ಪೊರೆಯೊ ಎನ್ನ ಕರಿಗೀರೀಶ 7
--------------
ವರಾವಾಣಿರಾಮರಾಯದಾಸರು
ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು
ದೂರಕ್ಕೆ ದೂರನೆಂದು ಹೆರೆ ಸಾರಲಿ ಬೇಡಸಾರಿಗೆ ಸಾರಿ ನಮ್ಮ ಕೃಷ್ಣನ್ನ ಸಾರಿರೈಯ ಪ ಅನಂತ ಜನುಮದೊಳೊಂದೆ ಜನುಮಅನಂತ ಕ್ಷಣದೊಳಗೊಂದೆ ಕ್ಷಣಅನಂತ ನಾಮದೊಳೊಂದೇ ನಾಮವಮುನಮುಟ್ಟಿ ನೆನೆದರೆ ಬೆನ್ಹತ್ತಿ ಬಿಡನೈಯ 1 ಅನಂತರೂಪದೊಳೊಂದೆ ರೂಪಅನಂತ ಗುಣದೊಳಗೊಂದೆ ಗುಣಅನಂತ ಜೀವರೊಳಗಾವನಾದರುಂ ಕನಸಿಲಿ ನೆನೆದರೆ ಋಣಿಯಾಗಿಪ್ಪನೈಯ 2 ಒಂದೆ ಹೂವು ಒಂದೆ ಫಲವೊಂದೆಬಿಂದು ಜಲವೊಂದೆ ತುಳಸಿಒಂದೇ ವಂದನೆಯೊಂದೆ ಪ್ರದಕ್ಷಿಣೆಒಂದನರ್ಪಸಿದೊಡಂ ಕುಂದದಾನಂದವೀವನೈ 3 ಹರಿ ಚಿನ್ಹಾಂಕನ ಹರಿದಿನದುಪವಾಸನೆರೆಯೂಧ್ರ್ವ ಪುಂಡ್ರ ತುಳಸಿಮಾಲೆಹರಿಯುತ್ಸವ ಸೇವೆ ಹರಿದಾಸರ ಸಂಗದುರಿತಾಬ್ಧಿಗೆ ಕುಂಭಸಂಭವನಲ್ಲವೆ 4 ಹರಿಪಾದ ತೀರ್ಥವು ಹರಿಯ ನಿರ್ಮಾಲ್ಯವುಹರಿ ಆರತಿ ಧೂಪ ಶೇಷಂಗಳುಹರಿಯ ಪ್ರಸಾದ ಶಂಖೋದಕ ಪ್ರತ್ಯೇಕದುರಿತ ರಾಸಿಗಳನ್ನು ಸೋಕಲು ಸುಡದೆ 5 ಒಮ್ಮೆ ಪಾಡಿದಡಂ ಒಮ್ಮೆ ಪೊಗಳಿದೊಡಂಒಮ್ಮೆ ಬೇಡಿದಡಂ ಒಮ್ಮೆ ನೋಡಿದಡಂಒಮ್ಮೆ ಸಾರಿದಡಂ ಮತ್ತೊಮ್ಮೆ ಕರೆದಡಂನಮ್ಮಾತನಿವನೆಂದು ಕೈಯ ನೀಡುವನೈಯ 6 ತನ್ನಲ್ಲಿಪ್ಪನಾಗಿ ದೂರನಲ್ಲ ನರಹೊನ್ನು ಬೇಡ ಲಕುವಿರಮಣಗೆ ಅನ್ಯವ್ಯಾತಕ್ಕೆ ಈ ಪರಿಪೂರ್ಣಾನಂದಗೆನಿನ್ನವನೆಂದರೆ ತನ್ನನೀವನು ಕೃಷ್ಣ7
--------------
ವ್ಯಾಸರಾಯರು
ಬುದ್ಧಿ ಧೃತಿಯೆಂಬ ನಾರೇರು ಶ್ರೀಮುದ್ದು ಕೃಷ್ಣನ ಒಲಿಸಿಕೊಂಡರು ಪ.ಅಕ್ಕ ಬುದ್ಧಿವಂತೆ ತಂಗಿಗೆ ಬಲುನಿಕ್ಕರದಲಿ ಹಿತವಾಡಿದಳುಚಿಕ್ಕವಳೆಂದಂಜದೆÉ ಧೃತಿಯು ತಮ್ಮಕ್ಕನೊಳು ಬಡಿದಾಡಿದಳು 1ಕಟ್ಟಲೆ ಮೀರಿ ಮಾತಾಡದಿರೆ ತಂಗಿಸಿಟ್ಟು ಬರುತಿದೆ ಕಾಡದಿರೆಕಟ್ಟಲೆ ಮೀರಿ ಮೊದಲೆ ನವೆದೆ ನಿನ್ನಕಟ್ಟಿನೊಳಗೆ ಸಿಕ್ಕಿ ಬಲು ದಣಿದೆ 2ಒಗತನ ದಾರದೆ ಸಣ್ಣವಳೆ ನೀಜಗಳಕ್ಕೆ ನಿಂತೆ ದೊಡ್ಡೆದೆಯವಳೆನಗೆಗೇಡು ಮಾಡಿಕೊಂಡೆಲೆಯಕ್ಕ ನಿನಗೊಗತನ ನನ್ನಿಂದ ತಗಲಕ್ಕ 3ಹರಿನಿನಗೆ ದಕ್ಕಿದನೆಂದು ಉಣ್ಣದುರಿಯಬೇಡೆಲೆ ತಂಗಿ ಹೋಗಿಂದುಅರಸ ದಕ್ಕುವನೆ ಇನ್ನಾರಿಗೆ ಅಕ್ಕಕಿರುಕುಳು ಮಾತ್ಯಾಕೆ ಹಿರಿಯಳಿಗೆ 4ನನ್ನ ಹಿರಿಯತನ ಕೆಣಕಿದ್ಯಲ್ಲೆನನ್ನ ಕಣ್ಣ ಮುಂದೆ ನಿನ್ನೆ ಬಂದವಳೆಹುಣ್ಣಿಮೆ ಚಂದ್ರ ದಿನಕೆ ಹಿರಿಯ ಜಗಮನ್ನಣೆಗೆ ಬಾಲಚಂದ್ರನಲ್ಲೆ 5ಪಟ್ಟ ನನ್ನದು ಮೊನ್ನೆ ಬಂದವಳೆ ನಿನ್ನದಿಟ್ಟತನವನೇನ ಹೇಳಲೆಕೃಷ್ಣ ನಿನಗೆ ದೂರನಲ್ಲೆ ಅಕ್ಕ ಹರಿಯಗುಟ್ಟಿನ ಮೋಹವೆ ನನಗೆ ಅಕ್ಕ 6ತಂಗಿ ಮನವ ನೋಯಿಸ್ಯಾಡದಿರೆ ಶ್ರೀರಂಗನೆನಗೆರವು ಮಾಡದಿರೆಮಂಗಳ ಮಹಿಮ ಮುರಾರಿಯ ಅರ್ಧಾಂಗಿಯೆ ನಾ ನಿನಗೆ ಸರಿಯೆ 7ಹಿರಿಯ ಕಿರಿಯಳಲ್ಲ ಸರಿ ಹೇಳೆಹರಿಗೆರವಿನ ಮಾತಿಲ್ಲಖರೆಕೇಳೆಪರಮಪುರುಷ ವಾಸುದೇವನೆ ಕೊಟ್ಟವರಕೆಂದು ತಪ್ಪದೆ ಕಾವನೆ 8ಕನ್ಯೆ ಲಕ್ಷುಮಿಯ ರಮಣನೆ ಸ್ವಾಮಿತನ್ನ ನಂಬಿದವರ ಹೊರೆವನೆಪುಣ್ಯ ಗೋಪೀಜನಜಾರನೆ ಪ್ರಸನ್ನವೆಂಕಟಪತಿ ಧೀರನೆ 9
--------------
ಪ್ರಸನ್ನವೆಂಕಟದಾಸರು