ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗದಯ್ಯಾ ಜಗದಯ್ಯಾ ಜಗತ್ರಾಣ ಜಗಜೀವನ ಪಾವನ ಪ ಸಾವು ಹುಟ್ಟುಯೆಂಬ ಹೇಯಕುಣಿಯೊಳು ಬಿದ್ದು ನೋಯಲಾರದೆ ಬಲು ಬಾಯಬಿಡುತ ನಿಮ್ಮ ಪಾವನ ಪಾದಕ್ಕೆ ಮರೆಯಬಿದ್ದೆನಯ್ಯ ಸೇವಕಜನರಯ್ಯಾ ಕಾಯೋ ಎನ್ನಾರ್ಯ 1 ಪರಿಭವಶರಧೆಂಬ ಉರಿವಕಿಚ್ಚಿನೊಳು ಪರಿಪರಿಮರುಗುತ ಕರುಣಾಂಬುಧಿ ನಿನ್ನ ಅರಿವಿಟ್ಟರಿದೆ ವರ ಪರಮ ಬಿರುದುಗಳು ಶರಣಾಗತರ ಪ್ರಿಯಕರ ಪಿಡಿದೆತ್ತಯ್ಯ 2 ವಿಷಯಲಂಪಟವೆಂಬ ವ್ಯಸನಕೂಪದಿ ಬಿದ್ದು ಬಸವಳಿದನುಪಮ ದೆಸೆಗೆಟ್ಟೆ ಕುಸುಮಾಕ್ಷ ಶಿಶುವಿನ ತವಪಾದ ಅಸಮದಾಸಜನ ರೊಶದಿ ಇಟ್ಟು ಪೊರೆ ಕುಶಲಮತಿಯ ನೀಡಿ3 ಭವಭವದಲಿ ಬೇಡುವೆನಭವನೆ ಬಾಗಿ ದಯಪಾಲಿಸಿ ಸ್ಥಿರಜ್ಞಾನಸುಪದವ ಭವಗುಣಹಿಂಗಿಸಿ ದಿವನಿಶೆನ್ನುವುದಕೆ ಸವಿನಾಮವಿತ್ತು ಕಾಯೋ ಭವರೋಗವೈದ್ಯನೆ 4 ಮೂರರಿಂ ಗೆಲುವಿತ್ತು ಮೂರರಿಂದಾಂಟಿಸಿ ಮೂರರ ಮೋಹನಿವಾರಿಸು ದೇವ ಮೂರು ನಿನಗರ್ಪಿಸಿ ಸಾರಿಬೇಡುವೆ ನೀಡ ಪಾರಮೋಕ್ಷಪದ ಧೀರ ಶ್ರೀರಾಮಯ್ಯ 5
--------------
ರಾಮದಾಸರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು