ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನು ಎಂಬೊದೆ ದೊಡ್ಡದು ನೀನೆಲ್ಲಿಹೆಯೊ ನಾನೆಲ್ಲಿ ಕಾಣಲಿ ಪ. ನಾನೆಂಬೊ ವ್ಯಾಪಾರ ನೀನೆ ಮಾಡಿಹೆ ಗಾನಲೋಲ ಸರ್ವರಂಗಲಿ ನಾನೇ ಇಹೆನೆಂದು ಅ.ಪ. ಸರ್ವರೊಳಗೆ ನಾನೆಂಬೊದೇ ಇರಲಾಗಿ ಸಾರ್ವಜನಿಕ ನೀನೆಲ್ಲಿಹೆಯೊ ಸರ್ವಧಿಕಾರಿ ನೀನೇ ಎಂಬ ವಿಬುಧರ ಸರ್ವಕಾಲದಿ ಸರ್ವ ಸುರರ ಸಹಿತಿಹೆ ನಾನು 1 ಮಿಂಚಿದ ಪಾಪವ ಮಾಡುವ ಮನುಜರ ವಂಚಕತನದಲಿ ದೇಹದೊಳಿಹೆ ನೀನು ಸಂಚಿತಾರ್ಥದ ಪುಣ್ಯವ ಗಳಿಸಿದ ಭಕ್ತರ ಮಿಂಚಿನ ಹುಳದಂತೆ ಕಂಚಿ ವರದ ಇಹೆ 2 ರಘುಪತೆ ರಾಘವನೆನುತ ಶ್ರೀ ಶ್ರೀನಿವಾಸನ ಬಗೆ ಬಗೆ ಸ್ತುತಿಸದೆ ಅಧಮರಿಗಿಲ್ಲ ಅಘಹರ ಗೋಪಿಗೆ ಮಿಗೆಯಾಟ ತೋರಿಹೆ ನಗಧರ ಅಳಗಿರಿ ಸೊಗಸಿನ ಚೆನ್ನಿಗ ನಾನು 3
--------------
ಸರಸ್ವತಿ ಬಾಯಿ