ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆವು ಗುರುದಿವ್ಯ ಶ್ರೀ ಸುಚರಣ ಮಂಡಲದೊಳಾಯಿತು ಸುಭೂಷಣ ಧ್ರುವ ಇದೆ ನಿಜ ಪುಣ್ಯ ಪೂರ್ವಾರ್ಜಿತ ಇದರಿಟ್ಟು ಬಂತೆನಗಾಯಿತು ಒದಗಿ ಕೈಗೂಡಿತು ತ್ವರಿತ ಹೃದಯಲೆನ್ನಾಯಿತು ಉದಿತ 1 ಕಣ್ಣಾರೆ ಕಂಡೆವು ನಿಜ ಧನ ಜನುಮವೆನ್ನಾಯಿತು ಪಾವನ ಎನ್ನೊಳು ದೋರಿತಾನಂದ ಘನ ಧನ್ಯ ಧನ್ಯವಾಯಿತು ಜೀವನ 2 ಲೇಸು ಲೇಸಾಯಿತಯ್ಯ ನೋಡಿ ಭಾವಿಸಿದ ಸದ್ಗುರು ದಯಮಾಡಿ ವಾಸನೆ ಪೂರಿಸಿತು ಇಲ್ಲೆ ನೋಡಿ ದಾಸಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧನ್ಯ ಧನ್ಯವಾಯಿತು ಎನ್ನ ಜನುಮ ತನ್ನಿಂದ ತಾನೊಲಿದ ಘನ ಮಹಿಮ ಎನ್ನೊಳಗೆ ದೋರಿತಾನಂದೊ ಬ್ರಹ್ಮ ಕಣ್ಣಾರೆ ಕಂಡೆನು ಸದ್ಗುರು ಧರ್ಮ 1 ಬ್ರಹ್ಮಸುಖ ಹೊಳೆಯಿತು ಸಾಧುಸಂಗ ಚುಮು ಚುಮು ಕೊಡುತಿದೆಕೊ ಸರ್ವಾಂಗ ಧಿಮಿ ಧಿಮಿಗುಡುತ ತಾಲ ಮೃದಂಗ ಸಮಾರಂಭವಾಯಿತು ಬಾಹ್ಯಂತರಂಗ 2 ಎದುರಿಟ್ಟು ಬಂತು ಪುಣ್ಯ ಪೂರ್ವಾರ್ಜಿತ ಒದಗಿ ಕೈಗೂಡಿತೆನಗೆ ತ್ವರಿತ ಸಾಧಿಸಿತು ಮಹಿಪತಿಯ ಮನೋರಥ ಸದ್ಗುರು ಕೃಪೆಯಾಯಿತು ತಾ ಸದೋದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು