ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನಂತ ಅಪರಾಧ ಅನುಗಾಲ ಮಾಡುತಿಹೆ ಪ ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ ನಾನಾವಿಧದ ವಿಹಿತ ಧರ್ಮತೊರೆದು ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1 ಶ್ರೀಕಾಂತ ನಿನ್ನ ಸೇವೆಯನು ಮರೆದು ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು ಸಾಕಿದವರನು ನಾ ನಿರಾಕರಿಸಿ ಬಾಳುವೆನು 2 ಎನಗಿಂತ ಅಧಿಕರಾದವರ ಕೂಡ ದ್ವೇಷವನು ಅನುಗಾಲ ಮಾಡುವೆನೊ ಅನಿಮಿಷೇಶಾ ಎನಗೆ ಸರಿಯಾದವರ ಕಂಡು ಮತ್ಸರಿಸುವೆನು ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3 ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ ಮೋಸಮಾಡುವೆ ಜನರ ಪಾಶದಿಂದಾ ವಾಸುದೇವನೆ ಸರ್ವದೇಶ ಕಾಲಾದಿಗಳಿ ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4 ಸಕಲ ದುರ್ಗುಣಕೆ ಆಗಾರ ನಾನವನಿಯೊಳು ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ ಭಕುತವತ್ಸಲ ಗುರುಜಗನ್ನಾಥವಿಠಲನೆ ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5
--------------
ಗುರುಜಗನ್ನಾಥದಾಸರು
ಎಚ್ಚತ್ತು ಇರು ಕಂಡ್ಯ ಮನವೇ | ನಮ್ಮ | ಅಚ್ಯುತನಂಘ್ರಿಗಳನು ನೆನೆ ಕಂಡ್ಯ ಮನವೆ ಪ ಆಡದಿರಪವಾದಗಳನು ಕೊಂ | ಡಾಡದಿರಿನ್ನು ಚಿಲ್ಲರೆ ದೈವತಗಳನು || ಬೇಡದಿರು ಭಯ ಸೌಖ್ಯವನು ನೀ | ಮಾಡದಿರಿನ್ನು ದುರ್ಜನ ಸೇವೆಯನು || ಸಜ್ಜನ ದ್ವೇಷವನು1 ನರಜನ್ಮ ಬರುವದೆ ಕಷ್ಟ ಇದ- | ನರಿದು ನೋಡು ವಿಪ್ರಾದಿ ಶ್ರೇಷ್ಠ || ಮರಳಿಬಾಹುದು ಉತೃಷ್ಟ | ಕೇಳೆಲವೊ ಮರ್ಕಟ 2 ಹಾಳು ಹರಟೆಗೆ ಹೋಗಬೇಡ ನೀ ಕಂಡ | ಕೂಳನು ತಿಂದು ಒಡಲ್ಹೊರಿಯಬೇಡ || ಕಾಲ ವ್ಯರ್ಥ ಕಳಿಯ ಬೇಡ ನಮ್ಮ | ಶ್ರೀ ಹರಿಯ ದಯಮಾಡ 3 ಅನ್ಯ ಸ್ತ್ರೀಯರ ನೋಡ ಬೇಡಾ ಹಿಂದೆ | ಮಣ್ಣುಕೂಡಿದವರ ನೀ ನೋಡಾ || ಅನ್ಯ ಶಾಸ್ತ್ರವನೋದಬೇಡಾ ನಮ್ಮ | ಬೋಧ ಮೈ ಮರೆತಿರಬೇಡಾ 4 ಗೋ ವಿಪ್ರರ ಸೇವೆ ಮಾಡು ಸೋಹಂ | ಭಾವಗಳನು ಬಿಟ್ಟು ದಾಸತ್ವ ಕೊಡು || ಕೇವಲ ವೈರಾಗ್ಯ ಮಾಡು ವಿಜಯ || ಲಜ್ಜೆಯ ಈಡ್ಯಾಡೊ5 ನಾನು ಎಂಬುದು ಬಿಡು ಕಂಡ್ಯ ಎನ್ನ | ಮಾನಾಪಮಾನಕ್ಕೆ ಹರಿಯೆನ್ನು ಕಂಡ್ಯ || ಜ್ಞಾನಿಗಳ ಒಳಗಾಡು ಕಂಡ್ಯ ವಿಷಯ | ಬೀಳುವಿ ಯಮಗೊಂಡಾ 6 ಕಷ್ಟ ಪಡದೆ ಸುಖಬರದು ಕಂ- | ಗೆಟ್ಟ ಮೇಲಿನ್ನು ಕಷ್ಟ ತಿಳಿಯೋದು || ದುಷ್ಟ ವಿಷಯ ಆಶೆ ಜರಿದು ವಿಜಯ- | ಕೂಗೆಲವೊ ಬಾಯಿ ತೆರೆದು 7
--------------
ವಿಜಯದಾಸ
ಯಚ್ಚತ್ತು ನಡಿ ಕಂಡ್ಯ ಮನವೇ ನಮ್ಮ ಅಚ್ಯುತನಂಘ್ರಿಗಳನು ನೆನೆ ಮನವೇ ನೀ ನೆನೆ ಕಂಡ್ಯ ಮನವೇ ಪ ಆಡದಿರಪವಾದಗಳನು ನೀನು ಕೊಂಡಾಡದಿರು ಚಿಲ್ಲರೆ ದೈವಗಳನು ಬೇಡಾಡದಿರುಭಯ ಸೌಖ್ಯಗಳನು ನೀ ಮಾಡಿ ಕಂಡ್ಯ ದುರ್ಜನರ ಸ್ನೇಹವನ್ನು ಸಜ್ಜನರ ದ್ವೇಷವನು 1 ಹಾಳು ಹರಟಿಗ್ಹೋಗ ಬ್ಯಾಡ ಕಂಡ ಕೂಳುಗಳನು ತಿಂದು ವಡಲ್ಹೊರಿಯ ಬೇಡ ಕಾಲ ವೃಥಾ ಕಳಿಯ ಬ್ಯಾಡ ನಮ್ಮ | ಶ್ರೀ ಹರಿ ದಯಮಾಡಾ 2 ನಾನು ಯೆಂಬುದು ಬಿಡು ಕಂಡ್ಯಾ ಎನ್ನ ಮಾನಾಭಿಮಾನದ ಹರಿಯನ್ನು ಕಂಡ್ಯಾ ಜ್ಞಾನಿಗಳೊಡನಾಡು ಕಂಡ್ಯಾ ವಿಷಯ ಬೀಳುವಿ ಯಮಕೊಂಡಾ 3 ಅನ್ಯಸ್ತ್ರೀಯರ ನೋಡಬ್ಯಾಡಾ ಹಿಂದೆ ಮಣ್ಣು ಕೂಡಿರುವರೆಗೊ ಕೇಳೊ ಮೂಢಾ ಅನ್ಯಶಾಸ್ತ್ರವನೋದ ಬ್ಯಾಡಾ ನಮ್ಮ ಮೈಮರೆದಿರ ಬ್ಯಾಡಾ4 ನರಜನ್ಮ ಬರುವೋದು ಕಷ್ಟ ಅಮ್ಮ ಹಿರಿದು ನೋಡೆಲೋ ವಿಪ್ರತ್ವವು ಶ್ರೇಷ್ಠ ಮರಳಿ ಬಾರದು ಉತ್ಕøಷ್ಟ ನಮ್ಮ ಕೇಳೆಲವೋ ಮರ್ಕಟ 5 ಗೋವಿಪ್ರರ ಸೇವೆ ಮಾಡೋ ಸೋಹಂ ಭಾವಗಳನು ಬಿಟ್ಟು ದಾಸತ್ವ ಕೂಡೋ ಕೇವಲ ವೈರಾಗ್ಯ ಮಾಡೋ ಎಂಟು ಲಜ್ಜೆಯನೀಡ್ಯಾಡೋ6 ಕಷ್ಟ ಪಡದೆ ಸುಖ ಬರದು ಕಂ ಗೆಟ್ಟ ಮ್ಯಾಲಲ್ಲದೆ ಕಷ್ಟ ತಿಳಿಯದು ದುಷ್ಟ ವಿಷಯದಾಶೆ ಜರಿದು ವಿಜಯ ವಿಠಲನೆನ್ನದೆ ಮುಕ್ತಿಯು ಬರದೂ, ಕೂಗೆಲವೊ ಬ್ಯಾದೆರದು 7
--------------
ವಿಜಯದಾಸ
ಹರಿಕಾಣದ ಉಪಾಯ ನರಬಲ್ಲನೆ ದುರುಳರ್ ತಾವ್ ಕರ್ತರೆಂದು ವ್ಯರ್ಥರಾಗುವರು ಪ ಸುರಪತಿಯ ಸ್ವರ್ಗವನು ಬಲಿರಾಯ ಕೈಗೊಂಡು ಎರೆಡು ಐವತ್ತು ಹಯಮೇಧಗೈಯ್ಯೆ ಪುರಂದರಗೆ ತಮ್ಮನಾಗಿ ಉದಿಸಿ ಬಲಿಯನು ಗೆದ್ದು ಎರೆಡು ಅಡಿಯಲಿ ಬುವಿಯನಳೆದು ಕೊಳಲಿಲ್ಲವೆ 1 ಅಸುರರು ಅಮರರಲ್ಲಿ ಅತಿದ್ವೇಷವನುಗೈಯೆ ಬಿಸಜಲೋಚನ ತಾನು ಸ್ತ್ರೀರೂಪದಿ ನಸುನಗುತ ರಾಕ್ಷಸರ ಮೋಹಿಸಿ ಸುಧೆಯನು ಸುಮ | ನಸರಿಗಿತ್ತಾದರಿಸಿ ಕರುಣಿಸಿದ ಸ್ವಾಮಿ 2 ಗುರುಭೀಷ್ಮರನು ಗೆಲುವುದಕ್ಕೆ ಕೃಷ್ಣನು ಯುಧಿ ಷ್ಠಿರನಿಂದ ಒಂದು ನುಡಿಯನು ನುಡಿಸಿ ಗುರುರಾಮ ವಿಠಲಗೆ ಸರಿಯು ಇನ್ನುಂಟೆ? 3
--------------
ಗುರುರಾಮವಿಠಲ