ಮಳೆಯ ದಯಮಾಡೊ ರಂಗಯ್ಯ ನಿಮ್ಮ
ಕರುಣ ತಪ್ಪಿದರೆ ಉಳಿಯದೀ ಲೋಕ ಪ.
ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ
ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು
ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು
ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1
ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ
ಮೊಗೆ ಮೊಗೆದು ಪಾತ್ರೆಯಲಿ ನಾರಿಯರು
ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ
ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2
ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ
ಬಂದಿದೆ ಭಾದ್ರಪದ ಮಾಸವೀಗ
ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ
ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3