ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಲ್ಲಕ್ಕಿ ಸೇವೆಯವಧಾನ ಆಳಪಲ್ಲಕ್ಕಿಯಲಿ ಮಂಡಿಪುದು ಶಿವ ನಿಧಾನ ಪ ಮದನ ಕೈಗಳ ಸುಭುಜ-ವಲಯದೊಳ್ತಳದ ಪೂರುಷರ ಸರಪಂಸೆಗಳತೊಳಪಗಜಪಕ್ಷಿಯಗ್ರಗಳಾ ದೇವಲಲನೆಯರ ಚಾಮರದ ಕರದ ಚಲನೆಗಳಾ 1 ವಂದಿಮಾಗಧರೆಲ್ಲ ಕರವೆತ್ತಿ ಪೊಗಳುತಿರೆದಾಂಧಣಧಣಾ ಎಂದು ಮೊಳಗೆ ಮಂಗಳವಾದ್ಯಚಂದ್ರಸೂರ್ಯರು ಜಗಜ್ಯೋತಿಯನುಪಿಡಿದಿರಲು ಗಂಧರ್ವತತಿ ಪಾಡುತಿರಲುಮುಂದೆ ರಂಭಾದಿ ಗಣಿಕೆಯರು ನರ್ತಿಸಲು ದೇವೇಂದ್ರ ಮುಕ್ತಾಛತ್ರಮಂ ಪಿಡಿದಿರಲು ಧನದಕುಂದಣದ ಪಾದುಕೆಯ ಪಿಡಿದಿರಲುವಾಯು ನಲವಿಂದ ಸೀಗುರಿಯ ವೀಜಿಸಲುಸುರರು ಮುಂದೆ ಜಯಜಯವೆಂದು ಓಲೈಸುತಿರಲು 2 ಸುರರು ಹೂಮಳೆಗರೆಯೆ ಸುರದುಂದುಭಿಯು ಮೊಳಗೆಪರಮಋಷಿವರರು ವೇದಂಗಳನು ಪಠಿಸೆ ತುಂ-ಬುರನಾರದರು ವೀಣೆಯನು ಬಾಜಿಸಲು ಗಣನಿ-ಕರ ಖಡ್ಗಶರವ ಪಿಡಿದಿರಲುಸರಸಿಜೋದ್ಭವನು ನಿಮ್ಮುನ್ನತಿಯನರುಹುತಿರೆಸುರರಾಜಮಂತ್ರಿ ಸಮಯವ ಸೂಚಿಸುತಿರಲುವರಕೆಳದಿಪುರವಾಸ ರಾಮೇಶ ಜಯವೆಂದುಹರಿ ಹಸ್ತಲಾಘವನು ಕೊಡಲು ಗೌರಿಹರುಷದಿಂ ಮುಂಬಿನೊಳು ರಂಜಿಸುತ್ತಿರಲು 3
--------------
ಕೆಳದಿ ವೆಂಕಣ್ಣ ಕವಿ
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ