ಸಾಲವನು ಕೊಳುವಾಗ ಸಡಗರದ ಸಿರಿಯೋ
ಸಾಲಿಗನು ಬಂದು ಕೆಳಲಾಗಡರಿತುರಿಯೋ ಪ
ಡಬ್ಬುಗೈದಿದ್ದವನೊಳ್ ಎಬ್ಬಿಸಿ ಹಣತಂದು
ಉಬ್ಬುಬ್ಬಿ ಸತಿಮುಂದೆ ಹೆಬ್ಬುಲಿಯ ತೆರದಿ
ಒಬ್ಬರೀಡಿಲ್ಲೆನಗೆಂದಬ್ಬರಿಸುತ್ಹೇಳುವನು
ತಬ್ಬಲು ಧಣಿಬಂದು ಮಬ್ಬಿನೊಳೆದ್ದೋಡ್ವ 1
ಹಣತಂದ ದಿನ ಅವನ ಮನೆಯೊಳಗೆ ಹಬ್ಬೂಟ
ವನಿತೆಯೊಳೆನುತಿಹ್ಯನು ನನಗಾರು ಸರಿಯೆ
ಹಣಕೊಟ್ಟ ಧಣಿಬಂದು ಮನೆಮುಂದೆ ಕುಳ್ಳಿರಲು
ಹೆಣಇರುವ ಮನೆಗಿಂತ ಘನದು:ಖಕೇಳೊ 2
ಕಡುಹಿಗ್ಗಿನಿಂದೊಸನ ಒಡವೆ ಉದ್ದರಿತಂದು
ಬಡಿವಾರ ಬಿಂಕ
ಕೊಡುವ ವಾಯಿದೆ ಕಳೆದು ಬಡಿಗೆಯು ಬರಲಾಗ
ಮಡದಿ ಸತ್ತವನಂತೆ ಇಡುವ ತಲಿ ಬುವಿಗೆ 3
ಅಕ್ಕಿಬೇಳೆ ಬೆಲ್ಲತಂದು ಅಕ್ಕರದಿಂ ಸತಿಸುತರಿ
ಗಿಕ್ಕುವಾಗ ನೋಡವನವಕ್ಕರಂಗಳನು
ಮಕ್ಕಮಾರಿಯಂದದಿ ತಿಕ್ಕುವಾಗಕೊಟ್ಟವರು
ಸಿಕ್ಕದೆ ತಿರುಗುವನು ಬಿಕ್ಕೆ ಬೇಡುಣುತ 4
ಮನೆಮುರಿದು ಹೋಗಲಿ ವನಿತೆಯರು ಜರಿಯಲಿ
ಎನಗೆಡರು ಬಂದೊದಗಿ ಅನ್ನ ಸಿಗದಿರಲಿ
ಘನಮಹಿಮ ಶ್ರೀರಾಮ ಮಣಿದುಬೇಡುವೆ ನಿನಗೆ
ಋಣದ ಬಾಳುವೆ ಬೇಡ ಜನಮಜನುಮಗಳಲಿ 5