ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(1) ಸತಿ-ಪತಿ ಭಾವದ ಸ್ತುತಿಗಳು (ಜಾವಡಿಗಳು) ಎಂದಿಗೆ ತೀರಿದೆ ಸುಂದರನಾಯಕಿ ಅಂಗಜ ಬಾಣದ ಅತುರವನ್ನೂ ಪ ಚಂದ್ರಮುಖಿಯೇ ನೀ ನಾದಿನ ಹೇಳಲ್ ಬಂದೆನುನಾನಹುದೇ ಭಾವಕರನ್ನೇ ಕುಂದುಗಳನೀಪರಿ ಉಸುರುವೆ ಉಚಿತವೆ ಸಂದಣಿಯಾಗೆನ್ನೊಳಿಂದಿನ ಕಾಲಯೆಂದಿಗೆ 1 ಬಲ್ಲೆನು ನಿನ್ನಂ ಭಾವದ ಸೊಲ್ಲಂ ಬೆಲ್ಲದ ಮಾತನಾಡಿ ಕಳುಹಿಪೆನೇಂ ಬೊಲ್ಲಿದಿಗೆ ಸಾಕುಬಿಡು ಇಂಪಿನ ಕವಚತೊಡು ಸಲ್ಲಿದೆ ಸುಂಕವ ಸಮ್ಮತಿಯಿಂದಾ 2 ಮಾರನು ಬಂದೂ ಮನದೊಳು ನಿಂದೂ ದಾರಿಯನು ತಪ್ಪಿಸಿ ಧಣಿಸುವ ಕಾಣೆ ಓರದೆ ಕೋರಿದ ಕಾರ್ಯವ ತೀರಿಸೆ ಕಾಂಕಳು ನೀನಾಗಿ ಕಾಮಶಾಸ್ತ್ರವಂ 3 ಈ ಸುಖಸಂಪದ ಈಶ್ವರ ಬಲ್ಲಂ ಆಸೆಯ ತೋರಿ ನೀ ಮೋಸವಗೆಯ್ವೆ ದಾಸನು ವಂದಿಪ ಸುಖತೋರಿದೆ ದೇಶಿಕನಲೆ ತುಲಸಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
ನೀರಿನೊಳು ಮುಳುಗುತಿರೆ ತೋರದಲಿ ಪೋಗುವರೆ ಕರ ಪಿಡಿವರೈ ತೋರು ಶೌರೇ ವಾರಿಜಾನಾಭ ಭಯ ತೋರುವರೆ ಕರುಣಾಳು ಬಾರದಿರುವಂಥ ಅಪರಾಧವೇನೆಲೊ ಹರೀ ಪ. ಪರಿ ಮನಸಿನೊಳಗೊಂದು ಪರಿ ವನಜನಯನನೆ ಭಯವ ತೋರಿ ತೋರೀ ಪರಿ ಏನೋ ಬಿನಗುದೈವರ ಗಂಡ ಪರಿಹರಿಸು ಗಂಡಾ1 ಕರಿಯ ನೀರೊಳು ಕಾಯ್ದೆ ಪೊರೆದೆ ನೀರೊಳು ಮನುವ ಧರಣಿ ಪ್ರಹ್ಲಾದರನು ಜಲದಿ ಸಲಹೀ ಬಿರುದು ಪೊತ್ತವ ಎನ್ನ ಪರಿಯನರಿಯೆಯೆ ದೇವ ಪೊರೆವರಿನ್ನಾರು ಹೇ ಕರುಣಾಳು ಶರಣೂ 2 ಮುಳುಗಿಹೆನು ಸಂಸಾರ ಗಣಿಸಲಾಗದ ಕರ್ಮ ಕರವ ಪಿಡಿದೂ ಧಣಿಸು ನಿನ ದಾಸತ್ವ ಧರೆಯೆ ಮೇಲ್ ಡಂಗುರದೀ ಘಣಿಶಾಯಿ ಗೋಪಾಲಕೃಷ್ಣವಿಠಲ ಕೈಪಿಡಿದು 3
--------------
ಅಂಬಾಬಾಯಿ