ನಿತ್ಯ ಸ್ಮರಿಸಿ ಕೃತಕೃತ್ಯನು ನೀನಾಗೊ ಪ
ಕರ ಕಂ-
ಜೋತ್ಥರಾದ ಗುರು ಅ.ಪ
ಸುತ್ತಲು ಬಿಡದೆ ಧರಿತ್ರಿಯೊಳಗೆ ಸುಕ್ಷೇತ್ರಗಳಲಿ ಚರಿಸಿ
ಹಸ್ತಿ ಗಣಕೆ ಪಂಚ ವಕ್ತ್ರರೆಂದು ಕರಿಸಿ
ಛಾತ್ರ ವರ್ಗ ಸಂಯುಕ್ತರಾಗಿ ಸುಖತೀರ್ಥರ ಸುಮತಕೆ
ಸಂಸ್ಥಾಪಕ ಗುರು 1
ಏನು ಕರುಣವೊ ಜ್ಞಾನಿಗಳನು ಧನದಾನದಿ ದಣಿಸುತಲಿ
ಕ್ಷೋಣಿ ವಿಬುಧರಿಗೆ ನ್ಯಾಯ ಸುಧಾರಸ ಪಾನ ಮಾಡಿಸುತಲಿ
ದೀನ ಜನಕೆ ಸುರಧೇನು ಎನಿಸಿದ ಮಹಾನುಭಾವರೆಂದು
ಸಾನುರಾಗದಲಿ 2
ಶ್ರೀರಾಮನ ಪದಪದುಮ
ನೋಳ್ಪಜನರ ಜನುಮ
ಧೀಮಜ್ಜನರಿಗೆ ಕಾಮಿತ ಗರಿಯುವ3
ತರಣಿಯೋಳ್ಪಗಲಿರುಳು
ಭವಶರಧಿಯ ದಾಟಿಸಲು
ವಸನದಲಿ ಪರಿಶೋಭಿತ ತನು 4
ದುರಿತ ತಮಕೆ ದಿನಕರ ಸಮರೆನಿಸುತಲಿ
ಸಿರಿ ಕಾರ್ಪರ ನರಹರಿಯ ಚರಣಯುಗ್ಮ ಸ್ಮರಿಸುತ ಹರುಷದಲಿ
ಧರೆಯೊಳು ಪಂಢರ ಪುರ ಸುಕ್ಷೇತ್ರದಿವರತನುವಿರಿಸಿದ
ಪರಮ ಮಹಿಮ ಗುರು 5