ಎಂತು ಮರೆಯಬಹುದು ನಿಮ್ಮ ಹೇಳು ಗುರುರಾಯ |
ಅಂತರಂಗದೀ ನೆನೆದು ಪಡೆಯಬೇಕು ಸುಖಾಶ್ರಯಾ ಪ
ತಂದೆ ನೀನೇ ತಾಯಿ ನೀನೇ ಬಂಧು ಬಳಗ ನೀನೇ |
ಹೊಂದಿ ಹರುಷಬಡುವಗತಿಯ ಗುರು ದೈವ ನೀನೇ 1
ತಂದು ಜಠರದಲ್ಲಿ ಜನುಮ ಉಣಿಸಿ ಉಡಿಸಿ ಬೆಳೆಸೀ |
ಛಂದದಿಂದಲಿ ಹೊರೆವೆಯಿನ್ನು ಬೇಡಿದನು ಸಲಿಸಿ 2
ಮರೆಯಲಿಕ್ಕೆ ದೇಶಗ್ರಾಮ ವೃತ್ತಿಗೃಹಗಳಲ್ಲಾ |
ಕಾಯ ಸುಖದ ದ್ರವ್ಯ ಧನವಲ್ಲಾ3
ಮರಹು ಮರಸಿ ಅರವ್ಹಿಲಿರಿಸಿ ಇರಹು ಘನವನರಸಿ |
ಗುರು ಮಹಿಪತಿ ಸ್ವಾಮಿ ಕಾಯಿದೇ ಕಂದನುದ್ಧರಿಸಿ4