ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ಯಾನ ಮಾಡಿರೊ ರಂಗಯ್ಯನ ಪ ಗಾನ ವಿಲೋಲನ ದೀನಾರ ಪೊರೆವೊನ ಅ.ಪ. ಮೀನ ರೂಪವ ತಾಳಿ ದಾನವಾಖ್ಯನ ಸೀಳಿ ಮಾನವ ಪೊಂದಿದ ಜಾಣ ರಂಗೈಯ್ಯನ 1 ಕೂರ್ಮ ತಾನಾಗಿ ಗಿರಿಯ ಬೆನ್ನಲಿ ಪೊತ್ತು ಸುರರನ್ನೆ ಪೊರೆದ ಗಂಭೀರ ರಂಗೈಯ್ಯನ 2 ವರಾಹ ರೂಪದಿ ಕೋರೆಯ ಕೊನೆಯಲಿ ಧರಣಿಯನೆತ್ತಿದ ಶೂರ ರಂಗೈಯ್ಯನ 3 ನರಹರಿ ರೂಪದಿ ಘೋರ ದೈತ್ಯನ ಸೀಳಿ ತರಳನ ಸಲಹಿದ ಕರುಣಿ ರಂಗೈಯ್ಯನ 4 ಪುಟ್ಟ ಹಾರುವನಾಗಿ | ದಿಟ್ಟ ಬಲಿಗೆ ಒಲಿದು ಕೊಟ್ಟ ವರಗಳ ದಿಟ್ಟ ರಂಗೈಯ್ಯನ 5 ಪರಶು ಪಿಡಿದು ಭೂವರರ ಗೆಲಿದು ಭೂ ಸುರರನ್ನೆ ಸಲಹಿದ ಧೀರ ರಂಗೈಯ್ಯನ6 ಮಾನವ ರೂಪದಿ ದಾನವಾಂತಕನಾಗಿ ದೀನರ ಪೊರೆದ ಸುಜ್ಞಾನಿ ರಂಗೈಯ್ಯನ 7 ಕಂಸನ ವಂಶ ನಿರ್ವಂಶಾಕೋಸುಗ ಯದು ವಂಶದೊಳು ತಾನು ಜನಸಿದನು ಹಿಂಸೆ ಮಾಡುತಲಿರ್ದ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಮುರಧ್ವಂಸಿ ಕೃಷ್ಣಗೆ 8 ಸತಿಯರ ವ್ರತದಿಂದ ಪತಿತರಳಿಯದಿರೆ ಗತಿ ತೋರದೆ ಭವಕಾತರಿಸೆ ಅತಿ ನಗ್ನದಿ ಬಂದು ವ್ರತಭಂಗ ಮಾಡಿದ ಸಿರಿ ಕಂಠÀನುತನಾದ ಸಿತವಾಹನ ಸಖನ 9 ವೇದ ಬಾಹಿತರನ್ನು ಭೂದೇವಿ ಧರಿಸದೆ ಮಾಧವ ಪೊರೆಯೆಂದು ಮೊರೆಯಿಡಲು ಚದುರತನದಿ ಸತಿಯ ಕುದುರೆಯ ಮಾಡಿತಾ ಕೊಂಡ ಕದನದಿ ಕೊಂದವನ 10 ಮಂಗಳ ಮಹಿಮನ ಶೃಂಗಾರ ಪ್ರಿಯನ ಅಂಗಜಾರಿಯ ಧನುರ್ಭಂಗನ ಅಂಗಳದೊಳು ಮೂರ್ಲೋಕಂಗಳ ತೋರಿದ ತುಂಗ ವಿಕ್ರಮನಾದ ರಂಗೇಶವಿಠಲನ 11
--------------
ರಂಗೇಶವಿಠಲದಾಸರು