ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ
ಗುರುಕೃಪೆಯಿಂದ ಧ್ರುವ
ಸದಮಲ ಸುಖಕಲ್ಲೋಳ
ಬೆಳಗುದೋರುತಲ್ಯದೆ ಬಹಳ
ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ
ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1
ಮಾಯವಗಂಡು
ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು
ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು
ಸ್ಮರಣಿಯ ಸವಿದುಂಡು 2
ಸದ್ಗುರು ಎನ್ನೊಡೆಯ
ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ
ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ
ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3