ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಸಗುಣ ನಿರ್ಗುಣ ಬಾರಯ್ಯ ಬ್ರಹ್ಮಾನಂದ ಸುಖವು ದೋರಯ್ಯ ಧ್ರುವ ಕಣ್ಣು ಬಡೆಯುತದೆ ನಿಮ್ಮ ನೋಡೇನೆಂದು ಪುಣ್ಯಚರಣ ಸುಪ್ರಭೆದೋರೋ ನೀ ಬಂದು ಧನ್ಯಧನ್ಯಗೈಸುವದೋ ಕೃಪಾಸಿಂಧು ಎನ್ನೊಡೆಯ ನೀನಹುದೋ ದೀನಬಂಧು 1 ಅನುದಿನ ಸುಸೇವೆ ನಿಮ್ಮ ಮಾಡೇನೋ ಕ್ಷಣಕ್ಕೊಮ್ಮೆ ಸ್ವರೂಪ ನಾನೋಡೇನೋ ಘನ ಸುಖದೊಳು ನಾ ಬೆರೆದಾಡೇನೋ ನೆನೆವಂಥ ದಾಸರ ನಿಮ್ಮ ಕೂಡೇನೋ 2 ಹೃದಯದೊಳು ನಿಜವಾಗಬೇಕಿಗ ಸದಾಸರ್ವದಾ ಮಾಡೋ ಏನ್ನೊಳೀವ್ಹಾಂಗ ಪಾದಪದ್ಮಕ್ಯೋಗ್ಯ ಮಾಡೋ ಮಹಿಪತಿಗೆ ಇದೆ ಪುಣ್ಯ ನೋಡಯ್ಯ ಕುಲಕೋಟಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು