ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು