ಅನಂತ ಅಪರಾಧ ಅನುಗಾಲ ಮಾಡುತಿಹೆ ಪ
ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ
ನಾನಾವಿಧದ ವಿಹಿತ ಧರ್ಮತೊರೆದು
ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ
ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1
ಶ್ರೀಕಾಂತ ನಿನ್ನ ಸೇವೆಯನು ಮರೆದು
ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು
ಸಾಕಿದವರನು ನಾ ನಿರಾಕರಿಸಿ ಬಾಳುವೆನು 2
ಎನಗಿಂತ ಅಧಿಕರಾದವರ ಕೂಡ ದ್ವೇಷವನು
ಅನುಗಾಲ ಮಾಡುವೆನೊ ಅನಿಮಿಷೇಶಾ
ಎನಗೆ ಸರಿಯಾದವರ ಕಂಡು ಮತ್ಸರಿಸುವೆನು
ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3
ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ
ಮೋಸಮಾಡುವೆ ಜನರ ಪಾಶದಿಂದಾ
ವಾಸುದೇವನೆ ಸರ್ವದೇಶ ಕಾಲಾದಿಗಳಿ
ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4
ಸಕಲ ದುರ್ಗುಣಕೆ ಆಗಾರ ನಾನವನಿಯೊಳು
ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ
ಭಕುತವತ್ಸಲ ಗುರುಜಗನ್ನಾಥವಿಠಲನೆ
ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5