ಕಮಲನಾಭ ಕ್ಷಮೆಯಳೆದ ಪಾದ
ರಮೆಯರಸನೆ ರಮ್ಯ ಚರಿತ
ಕಮಲ ಪಾದವ ತೋರೋ ಅ.ಪ.
ಸೂರ್ಯ ತೇಜ ಪೊಳೆವ ಶೇಷಶಯನ ತಲ್ಪದಿ
ಹಾಟಕಾಂಬರಧರ ಕಿರೀಟ ಮಾಲ ಶೋಭ ಕೃಷ್ಣನೆ
ಸಾಟಿಯಿಲ್ಲದ ಕರದಿ ಲಕುಮಿ ಧಾಟಿಯಿಂದ ವೊತ್ತುವ ಪಾದ
ಸಾಟಿಯಿಲ್ಲದೆ ನಿನ್ನ ಭಕ್ತರ ಪೊರೆವ ದೇವ ನಿನ್ನ ಪಾದವು 1
ದುಷ್ಟರನ್ನು ಮೆಟ್ಟಿ ತುಳಿದ ದಿಟ್ಟ ಕೃಷ್ಣನ ಪಾದವು
ಮೆಟ್ಟಿ ಕಾಳಿಂಗನ ಹೆಡೆಯ ದಿಟ್ಟ ರಂಗನ ಪಾದವು
ಕಟ್ಟಿದ ವರಳನೆಳೆದು ಮತ್ತಿ ಮರವ ಮುರಿದ ಪಾದವು
ಕೊಟ್ಟ ಅಭಯ ಭಕ್ತರ ಪೊರೆವಡಿಟ್ಟ ಪಾದವು 2
ಕೂರ್ಮ ವರಹ ನರಹರಿ ಅಚ್ಚವಾಮನ ಪಾದವು
ಸಯಿಚ್ಚೆ ಪರಶುಧರ ಶ್ರೀರಾಮ ಕೃಷ್ಣ ನಿನ್ನ ಪಾದವು
ಅಚ್ಚವರವನಳಿದು ತೇಜ ಹತ್ತಿ ಮೆರೆವ ಪಾದವು
ಅಚ್ಚುತ ಶ್ರೀ ಶ್ರೀನಿವಾಸ ಕೃಷ್ಣ ನಿನ್ನ ಪಾದವು 3