ಹರಿಯನರಿಯದ ಜನುಮ ಧೆರೆಯೊಳಗಧಮಾಧಮ
ಹರಿಯ ನೆನೆಯದ ನರನು ಪಾಮರನು ಧ್ರುವ
ಹರಿಗೆ ನಮಿಸದ ಸಿರವು ತೋರುವ ಬೆಚ್ಚಿನ ತೆರವು
ಹರಿಗೆ ವಂದಿಸದ್ಹಣಿಯು ಹುಳಕ ಮಣಿಯು
ಹರಿಗೆ ಮುಗಿಯದ ಕೈಯು ಮುರುಕ ಕೀಲಿಯ ಕೈಯು
ಹರಿ(ಯ) ಕೊಂಡಾಡುವ ನಾಲಿಗೆ ಒಡಕ ಸೊಲಿಗೆಯ 1
ಹರಿಯ ಸ್ತುತಿಸದ ಮುಖ ಚೀರುವ ಚಿಮ್ಮಡಿಯ ಮುಖವು
ಹರಿಕಥೆ ಕೇಳದ ಕಿವಿಯು ಹಾಳುಗವಿಯು
ಹರಿಯ ನೋಡದ ಕಣ್ಣು ತೋರುವ ನವಲ್ಗರಿಗಣ್ಣು
ಹರಿಯ ಆರಾಧಿಸದ ಮನವು ಹೀನತನವು 2
ಹರಿಯ ಸೇವೆಗೊದಗದ ಕಾಲು ಮುರುಕ ಹೊರಸಿನ ಕಾಲು
ಹರಿಗೆ ಮಾಡದ ಭಕ್ತಿ ಮೂಢ ಯುಕ್ತಿ
ಹರಿಯೆ ಶ್ರೀಗುರುವೆಂದು ಗುರುವೆ ಪರದೈವವೆಂದು
ಸಲೆಮೊರೆಹೊಕ್ಕಿಹ ಮೂಢ ಮಹಿಪತಿಯ 3