ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ನಿನಗೆ ಶರಣನೆಂಬೆ ಸೋಮನಾಥಾ ಸಕಲ ಕಾಮಿತಾರ್ಥವಿತ್ತು ಸಲಹೊ ಸೋಮನಾಥಾ ಪ. ಹರಿಯ ಕರುಣಾ ಬಲದಿ ನೀನು ಸೋಮನಾಥಾ ಸರ್ವ ಸುರರಿಗೆಲ್ಲ ಧೊರೆಯಾಗಿರುವಿ ಸೋಮನಾಥ ಪಾದ ನಂಬಿ ಸೋಮನಾಥ ಮೊರೆಯ ಹೊಕ್ಕೆ ನಿಂದು ಬಂದು ಸೋಮನಾಥ 1 ವಿಘ್ನರಾಜ ನಿನ್ನ ಮಗನು ಸೋಮನಾಥಾ ಬೇಗ ಭಸ್ಮಗೈಸು ವೈರಿಗಳನು ಸೋಮನಾಥಾ ಮಗ್ನನಾದೆ ಮಹಾಂಬುಧಿಯೊಳ್ ಸೋಮನಾಥಾ ಸರ್ವ ವಿಘ್ನವೋಡಿಸೈ ಕೃಪಾಳೊ ಸೋಮನಾಥ 2 ಶಂಕರ ಕೈಪಿಡಿಯೊ ತ್ರಿಪುರ ಬಿಂಕವಾರಿ ಶ್ರೀ- ವೆಂಕಟಾದ್ರಿನಾಥನ ಮನೋನುಸಾರೀ ಕಿಂಕರನೆಂದೆನಿಸೆನ್ನ ಮೃಗಾಂಕಧಾರೀ ಪಾದ- ಪಂಕಜವ ನೀಡು ಸರ್ವಾತಂಕಹಾರೀ 3
--------------
ತುಪಾಕಿ ವೆಂಕಟರಮಣಾಚಾರ್ಯ