ಒಲಿದವಳ ಬಿಡುವುದು ಧರ್ಮವಲ್ಲ |
ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ
ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ |
ಅಂದೆ ನೇಮಿಸಿದರು ಪೆಸರನಿಟ್ಟು |
ಸಂದೇಹಗೊಳದಿರು ಮೈಲಿಗೆಯವಳೆಂದು |
ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1
ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ |
ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ |
ಅನ್ಯಾಯವೇನು ಆಗಲಿ ಪೋಗುವರೇನೊ |
ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2
ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ |
ಬಲು ಶುಚಿಯಾದೆನೊ ಶುದ್ಧ ಜಲದಿ |
ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ |
ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3
ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ |
ಸೊಗಸಿಗನೆ ಸರಸವಾಡುವನೆ ಬಾರೊ |
ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು |
ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4
ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ |
ಅಂಡೊಲಿವ ಖ್ಯಾತಿ ಎಂದಿಗೆ ತೀರದೂ |
ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ |
ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5